ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಪ್ರಧಾನ ಕಚೇರಿಯಲ್ಲಿ 42 ಸಿಬ್ಬಂದಿಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ, ಜನವರಿ 12: ಬಿಜೆಪಿ ಪ್ರಧಾನ ಕಚೇರಿಯಲ್ಲಿ 42 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ವಿಚಾರ ಬೆಳಕಿಗೆ ಬಂದಿದೆ.

ದೇಶಾದ್ಯಂತ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ, ಆಸ್ಪತ್ರೆಗಳಲ್ಲಿ ವೈದ್ಯರು ಕೂಡ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕಾಲೇಜು, ಶಿಕ್ಷಣಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ತಗುಲಿದೆ. ಅದೆಷ್ಟೋ ರಾಜಕಾರಣಿಗಳು ಕೊರೊನಾಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಜವಾದ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 60-90 ಪಟ್ಟು ಹೆಚ್ಚು: ತಜ್ಞರುನಿಜವಾದ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 60-90 ಪಟ್ಟು ಹೆಚ್ಚು: ತಜ್ಞರು

ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕೊರೊನಾ ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ಐಸೋಲೇಟ್​ ಆಗಿ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ, ಬಿಜೆಪಿ ಸಂಸದ ವರುಣ್​ ಗಾಂಧಿ, ಖುಷ್ಬು ಸುಂದರ್, ಮನೋಜ್​ ತಿವಾರಿ​ ಸೇರಿ ಹಲವರಿಗೆ ಸೋಂಕು ತಗುಲಿದೆ.

42 Members Of BJP Headquarters In New Delhi Test Positive For COVID-19

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸಭೆ ನಡೆದಿತ್ತು. ಅದರ ಹಿನ್ನೆಲೆಯಲ್ಲಿ ಕೊವಿಡ್ 19 ತಪಾಸಣೆ ನಡೆಸಿದಾಗ ಅನೇಕರಲ್ಲಿ ಸೋಂಕು ದೃಢಪಟ್ಟಿತ್ತು.

ನ್ಯಾಯಾಲಯಗಳಲ್ಲಿ ಜಡ್ಜ್​ಗಳು, ವಕೀಲರಲ್ಲಿ ಕೂಡ ಕೊವಿಡ್ ಕಾಣಿಸಿಕೊಂಡಿದೆ. ಎಲ್ಲ ಕಡೆಗಳಲ್ಲೂ 100-150ರ ಸಂಖ್ಯೆಯ ಲೆಕ್ಕದಲ್ಲೇ ಕಾಣಿಸಿಕೊಳ್ಳುತ್ತಿದೆ. ಹಾಗೇ, ಇದೀಗ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನಕಚೇರಿ 42 ಸಿಬ್ಬಂದಿಯಲ್ಲಿ ಕೊರೊನಾ ದೃಢಪಟ್ಟಿದೆ.

ಇನ್ನೊಂದೆಡೆ ಮಹಾರಾಷ್ಟ್ರ ಸರ್ಕಾರದಲ್ಲೂ ಹಲವು ಶಾಸಕರು, ಸಚಿವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮಹಾರಾಷ್ಟ್ರದ 15 ಸಚಿವರು ಮತ್ತು 70 ಶಾಸಕರಲ್ಲಿ ಕೊವಿಡ್ 19 ದೃಢಪಟ್ಟಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​ಗೂ ಕೂಡ ಕೊರೊನಾ ಸೋಂಕು ತಗುಲಿತ್ತು.

ಹೀಗೆ ಗುಂಪುಗುಂಪು ಜನರಿಗೆ ಕೊರೊನಾ ತಗುಲುತ್ತಿದ್ದು, ದೇಶದಲ್ಲೂ ದಿನೇದಿನೆ ಪತ್ತೆಯಾಗುತ್ತಿರುವ ಸೋಂಕಿನ ಕೇಸ್​ಗಳಲ್ಲಿ ಏರಿಕೆಯಾಗುತ್ತಿದೆ. ಮತ್ತೊಂದೆಡೆ ಮಹಾರಾಷ್ಟ್ರದಲ್ಲಿ 481 ರೆಸಿಡೆಂಟ್​ ವೈದ್ಯರಲ್ಲಿ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಮಹಾರಾಷ್ಟ್ರ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್​ ಅಧ್ಯಕ್ಷ ಡಾ. ಅವಿನಾಶ್​ ದಹಿಫಾಲೆ ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಣಿಪುರದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಉಳಿದಂತೆ ಗೋವಾ, ಉತ್ತರಾಖಂಡ್​, ಪಂಜಾಬ್​ಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಮುಖಂಡರು ಕೊರೊನಾ ಸೋಂಕಿಗೆ ಒಳಗಾಗುತ್ತಿರುವುದು ಸವಾಲಾಗಿ ಪರಿಣಮಿಸುತ್ತಿದೆ.
ಈ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಅಭಿಯಾನವನ್ನು ವೇಗಗೊಳಿಸಬೇಕು ಎಂದು ಈಗಾಗಲೇ ಚುನಾವಣಾ ಆಯೋಗ ಕೇಂದ್ರ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

Recommended Video

ಪಾದಯಾತ್ರೆಯಲ್ಲಿ ಡಿಕೆ ಸುರೇಶ್ ತಳ್ಳಿದ್ದಕ್ಕೆ ಮೊಹಮ್ಮದ್ ನಲಪಾಡ್ ಏನಂದ್ರು ನೋಡಿ | Oneindia Kannada

ಜನವರಿ 15ರವರೆಗೆ ಐದೂ ರಾಜ್ಯಗಳಲ್ಲಿ ಸಾರ್ವಜನಿಕ ಮೆರವಣಿಗೆಗಳು, ರೋಡ್​ ಶೋಗಳು, ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ.

English summary
42 members of the Bharatiya Janata Party (BJP) headquarters have tested positive for COVID-19. The members of BJP HQ in New Delhi who have tested positive for COVID-19 include security officials and party staff members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X