• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿಯ ಮಸೀದಿಯೊಳಗೆ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಮೌಲ್ವಿ ಬಂಧನ

|

ನವದೆಹಲಿ, ಜೂ. 02: ಈಶಾನ್ಯ ದೆಹಲಿಯ ಮಸೀದಿಯೊಂದರಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಪೊಲೀಸರು 48 ವರ್ಷದ ಮೌಲ್ವಿಯನ್ನು ಬಂಧಿಸಿದ್ದಾರೆ. ರಾಜಸ್ಥಾನದ ಭರತ್‌ಪುರ ಮೂಲದ ಮೌಲ್ವಿಯನ್ನು ಗಾಜಿಯಾಬಾದ್‌ನ ಲೋನಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

"ಆರೋಪಿ ಗಾಜಿಯಾಬಾದ್‌ನ ಲೋನಿಯಲ್ಲಿ ವಾಸಿಸುತ್ತಿದ್ದು, ವಿವಾಹಿತನಾಗಿದ್ದು ನಾಲ್ಕು ಮಕ್ಕಳಿದ್ದಾರೆ. ಭಾನುವಾರ ಸಂಜೆ 12 ವರ್ಷದ ಬಾಲಕಿ ಮಸೀದಿಗೆ ನೀರು ತರಲು ಹೋಗಿದ್ದಾಗ ಮೌಲ್ವಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ" ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅರ್ಚಕನ ಬಂಧನಬೆಂಗಳೂರಿನಲ್ಲಿ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅರ್ಚಕನ ಬಂಧನ

"ಬಾಲಕಿ ಮನೆಗೆ ಬಂದ ಬಳಿಕ ಪೋಷಕರಿಗೆ ವಿಷಯ ತಿಳಿಸಿದ್ದು ಬಾಲಕಿಯ ಪೋಷಕರು ಭಾನುವಾರ ರಾತ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೌಲ್ವಿಯ ವಿರುದ್ದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 [ಅತ್ಯಾಚಾರ] ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಮೌಲ್ವಿಯನ್ನು ನಗರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿಯಾಗಿದೆ.

ಉನ್ನಾವೊ ಅತ್ಯಾಚಾರ ಆರೋಪಿ ಸೆಂಗರ್ ಪತ್ನಿಗೆ ಬಿಜೆಪಿ ಟಿಕೆಟ್ಉನ್ನಾವೊ ಅತ್ಯಾಚಾರ ಆರೋಪಿ ಸೆಂಗರ್ ಪತ್ನಿಗೆ ಬಿಜೆಪಿ ಟಿಕೆಟ್

ಇನ್ನು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಆಕ್ರೋಶಗೊಂಡ ಸ್ಥಳೀಯರು ಮಸೀದಿಯ ಎದುರು ಜಮಾಯಿಸಿದ ಕಾರಣ ಮಸೀದಿಯ ಹೊರಗೆ ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

(ಒನ್ಇಂಡಿಯಾ ಸುದ್ದಿ)

English summary
A 48-year-old cleric was arrested for allegedly raping a minor girl inside a mosque in Delhi when she went to fetch water. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X