ಗೋದಾಮು ಕುಸಿತದಿಂದ 5 ಜನರು ಸಾವು, ಇಬ್ಬರಿಗೆ ಗಂಭೀರ ಗಾಯ

ನವದೆಹಲಿ, ಜು.16: ದೆಹಲಿಯ ಅಲಿಪುರದಲ್ಲಿ ಗೋದಾಮು ಗೋಡೆ ಕುಸಿದು 5 ಜನರು ಸಾವನ್ನಪ್ಪಿದ್ದಾರೆ. ಹಾಗೂ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೌಡನ್‌ ಕಟ್ಟಡವನ್ನ ಸರಿಯಾಗಿ ದುರಸ್ತಿ ಮಾಡದ ಕಾರಣ ದುರ್ಘಟನೆ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಎನ್ನಲಾದ ಗುತ್ತಿಗೆದಾರ ಸಿಕಂದರ್‌ ದಾಸ್‌ ಮತ್ತು ಜಾಗದ ಮಾಲೀಕ ಸತೀಶ್‌ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಟ್ಟಡ ದುರಸ್ತಿ ಮಾಡುವುದರಲ್ಲಿ ನಿರ್ಲಕ್ಷ ತೋರಿರುವುದರಿಂದ ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 288, 304, 337, 338 ಮತ್ತು 34ರ ಅಡಿಯಲ್ಲಿ ಕೇಸ್‌ ದಾಖಲಿಸಿದ್ದಾರೆ. ಇನ್ನೋರ್ವ ಆರೋಪಿ ಶಕ್ತಿ ಸಿಂಗ್‌ ಎಂಬುವನು ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಈ ದುರ್ಘಟನೆಯಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಾಗೂ 'ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ನನಗೆ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರರನ್ನು ಕಳೆದುಕೊಂಡವರ ನೋವು ಅರ್ಥವಾಗುತ್ತದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಕಾರ್ಯಲಯ ಟ್ವೀಟ್‌ ಮಾಡಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್‌ ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌, ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ನಾನು ವೈಯಕ್ತಿಕವಾಗಿ ಪರಿಹಾರ ಒದಗಿಸುವ ಕಾರ್ಯವನ್ನು ಮಾಡುತ್ತೇನೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೆನೆ ಎನ್ನುವ ಮೂಲಕ ದುಃಖ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಸಂಪೂರ್ಣ ರಕ್ಷಣಾ ಕಾರ್ಯಚರಣೆಯ ಮೇಲೆ ಸಿಎಂ ಅರವಿಂದ್‌ ಕೇಜ್ರಿವಾಲ್‌ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಹೇಳಿದ್ದಾರೆ.

5 dead, 2 injured after under-construction godown wall collapsed in Alipur

ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ಗೋಡೆ ಕುಸಿದ ಕಾರಣ ಅಲ್ಲಿ ಇನ್ನು 6-12 ಜನರು ಸಿಲುಕಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಎಂದು ಸರ್ಕಾರ ಮೂಲಗಳು ತಿಳಿಸಿವೆ. ಅಲ್ಲದೇ ಕಟ್ಟಡದ ಕೆಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲು ಎನ್‌ಡಿಆರ್‌ಎಫ್‌ ತಂಡ ಕಾರ್ಯನಿರ್ವಹಿಸುತ್ತಿದೆ. ಹಾಗೂ ಘಟನಾ ಸ್ಥಳಕ್ಕೆ ತಕ್ಷಣ ಆಗಮಿಸಿದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+