ಚುನಾವಣೆ ಫಲಿತಾಂಶವು ಮೋದಿ ಆಡಳಿತದ ಮೌಲ್ಯಮಾಪನ ಅಲ್ಲ: ರಾಜ್ ನಾಥ್ ಸಿಂಗ್
ನವದೆಹಲಿ, ಡಿಸೆಂಬರ್ 11: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾದ ಅಥವಾ ಪೂರಕವಲ್ಲದ ಜನಾದೇಶ ಬರುತ್ತಿದ್ದಂತೆಯೇ, ಈ ಫಲಿತಾಂಶವು ಆಯಾ ರಾಜ್ಯದ ಆಡಳಿತ ವೈಖರಿಗೆ ಜನರು ನೀಡಿದ ತೀರ್ಪು ವಿನಾ ಮೋದಿ ನೇತೃತ್ವದ ಕೇಂದ್ರ ಸರಕಾರದ ಮೌಲ್ಯಮಾಪನ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ 'ಮಹಾ ಮೈತ್ರಿಕೂಟ' ತೆಲಂಗಾಣದಲ್ಲಿ ದೊಡ್ಡ ಮಟ್ಟದಲ್ಲಿ ಸೋತಿದೆ. ಅಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ ಜಯ ದಾಖಲಿಸಿ, ಮತ್ತೆ ಅಧಿಕಾರದ ಗದ್ದುಗೆಗೆ ಏರಿದೆ ಎಂದು ಅವರು ಹೇಳಿದ್ದಾರೆ.
ಸಂಸತ್ ನ ಹೊರಭಾಗದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಗೆದ್ದ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಅವರು ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಛತ್ತೀಸ್ ಗಢ, ರಾಜಸ್ತಾನ ಹಾಗೂ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದ್ದರೆ, ಮಿಜೋರಾಂನಲ್ಲಿ ಅಧಿಕಾರ ಕಳೆದುಕೊಂಡಿದೆ. ತೆಲಂಗಾಣದಲ್ಲಿ ಟಿಆರ್ ಎಸ್ ಭರ್ಜರಿ ಗೆಲುವು ದಾಖಲಿಸಿದೆ.












Click it and Unblock the Notifications