ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ನಿರ್ವಹಣೆ ವೈಫಲ್ಯ: ದೆಹಲಿಯ ಶೇ.51 ನಾಗರಿಕರಿಗೆ ಅಸಮಾಧಾನ

|
Google Oneindia Kannada News

ನವದೆಹಲಿ, ಫೆಬ್ರವರಿ 16:ದೆಹಲಿ ಸರ್ಕಾರವು ಕೊರೊನಾ ಸೋಂಕಿನ ನಿರ್ವಹಣೆ ಮಾಡುವಲ್ಲಿ ಸೋತಿದೆ ಎಂದು ಶೇ.51ರಷ್ಟು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ವಲಯಗಳ ಸಮೀಕ್ಷೆಯ ಪ್ರಕಾರ, 2 ವರ್ಷಗಳ ಅಧಿಕಾರವನ್ನು ಪೂರೈಸಿರುವ ಆಮ್ ಆದ್ಮಿ ಪಕ್ಷದ ರೇಟಿಂಗ್ ಕುಸಿದಿದೆ 3 ರಲ್ಲಿ 1 ದೆಹಲಿಯ ಜನರು ಅದರ ಎರಡು ವರ್ಷಗಳ ಕಾರ್ಯಕ್ಷಮತೆಯನ್ನು ಉತ್ತಮ ಅಥವಾ ಪರವಾಗಿಲ್ಲ ಎಂದು ರೇಟಿಂಗ್ ನೀಡಿದ್ದಾರೆ.

ಪಂಜಾಬ್ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಭಾವಚಿತ್ರ: ಕೇಜ್ರಿವಾಲ್ ಪ್ರತಿಜ್ಞೆಪಂಜಾಬ್ ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್, ಭಗತ್ ಸಿಂಗ್ ಭಾವಚಿತ್ರ: ಕೇಜ್ರಿವಾಲ್ ಪ್ರತಿಜ್ಞೆ

ಆಮ್ ಆದ್ಮಿ ಪಕ್ಷವು ತನ್ನ ಎರಡನೇ ಅವಧಿಯಲ್ಲಿ ದೆಹಲಿಯಲ್ಲಿ ಎರಡು ವರ್ಷಗಳನ್ನು ಪೂರೈಸಿದೆ ಮತ್ತು ಏಳು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿದೆ.ಆದಾಗ್ಯೂ, ಇತ್ತೀಚಿಗೆ ಸ್ಥಳೀಯ ವಲಯಗಳ ಸಮೀಕ್ಷೆಯ ಪ್ರಕಾರ, ಅದರ ಜನಪ್ರಿಯತೆಗೆ ಹೊಡೆತ ಬಿದ್ದಿದೆ ಎನ್ನಲಾಗುತ್ತಿದೆ.

51 Percent Residents Unhappy With Delhi Governments Handling Of Covid, Pollution: Survey

ಅಂಕಿ-ಅಂಶಗಳ ಪ್ರಕಾರ, ದೆಹಲಿ ಸರ್ಕಾರವು ಕೋವಿಡ್ -19 ಅನ್ನು ನಿರ್ವಹಿಸುವುದರಲ್ಲಿ ವಿಫಲವಾಗಿದೆ.ಕೊರೊನಾದ ಎರಡನೇ ಅಲೆಯ ವೇಳೆ ನಿರ್ವಹಣೆಗಾಗಿ ಎಎಪಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಆ ಕೊರೊನಾದ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಹೊರೆಯಾಗಿದ್ದಲ್ಲದೆ ಹಾಸಿಗೆಗಳು ಮತ್ತು ಆಮ್ಲಜನಕದ ತೀವ್ರ ಕೊರತೆಯನ್ನು ಎದುರಿಸಿದೆ.

ಸಮೀಕ್ಷೆಯ ಪ್ರಕಾರ ಕೆಲವು ಅಂಕಿಅಂಶಗಳು ವಿವರವಾದ ಚಿತ್ರವನ್ನು ನೀಡುತ್ತದೆ.ಸಮೀಕ್ಷೆಯು ದೆಹಲಿಯ ಎಲ್ಲಾ 11 ಜಿಲ್ಲೆಗಳ ನಿವಾಸಿಗಳನ್ನು ಒಳಗೊಂಡ 37,500 ಕ್ಕೂ ಹೆಚ್ಚು ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.ಈ ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ಶೇ 67% ಪುರುಷರು ಮತ್ತು 33% ಮಹಿಳೆಯರು ಎನ್ನಲಾಗಿದೆ.

ಭಾರತದಲ್ಲಿ ಕೊರೊನಾ ಇಳಿಕೆಯ ಹಾದಿ ಮುಂದುವರೆದಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,27,23,558ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,09,872ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,70,240ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 82,988 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 41843446ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 12,29,536 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 75,30,33,302 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,73,42,62,440 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

English summary
The Aam Aadmi Party has completed two years in Delhi in its second stint and has been in power in the state for seven years. The Arvind Kejriwal-wave helped the party come into power in the capital 2015 for the time, when a newly-born party took on, and won, against heavyweights BJP and Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X