ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: 24 ಗಂಟೆಯಲ್ಲಿ 540 ಕೊರೊನಾ ಸೋಂಕು, 17 ಸಾವು

|
Google Oneindia Kannada News

ದೆಹಲಿ, ಏಪ್ರಿಲ್ 9: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಂಟೆ ಗಂಟೆಗೂ ಅಧಿಕವಾಗುತ್ತಲೇ ಇದೆ. ಏಪ್ರಿಲ್ 9 ರಂದು ಬೆಳಿಗ್ಗೆ 9 ಗಂಟೆಯವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 5734 ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 540 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು 17 ಜನರು ಕೊವಿಡ್ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 6ನೇ ಸಾವುಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ 6ನೇ ಸಾವು

ದೇಶದಲ್ಲಿ ಒಟ್ಟು 5734 ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 5095 ಕೇಸ್‌ಗಳು ಚಾಲ್ತಿಯಲ್ಲಿದೆ. 473 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ. 166 ಮಂದಿ ಸೋಂಕಿನಿಂದ ಹೊರಬರದೆ ಸಾವನ್ನಪ್ಪಿದ್ದಾರೆ.

540 New COVID19 Cases In Last 24 Hours

ಏಪ್ರಿಲ್ 8ರ ಸಂಜೆಯವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 181ಕ್ಕೆ ಏರಿದೆ. ಇಂದು ಗದಗ ಜಿಲ್ಲೆಯಲ್ಲಿ 80 ವರ್ಷದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಂದು ಕರ್ನಾಟಕ ಆರೋಗ್ಯ ಇಲಾಖೆಯಿಂದ ಇಂದಿನ ಅಂಕಿ ಅಂಶ ನೀಡಬೇಕಿದೆ.

Exclusive: ಕೋವಿಡ್ ಹಾಟ್‌ಸ್ಪಾಟ್‌ ಆಗಲಿದೆಯಾ ವಿಕ್ಟೋರಿಯಾ ಆಸ್ಪತ್ರೆ? ಪ್ರತ್ಯಕ್ಷ ವರದಿ! Exclusive: ಕೋವಿಡ್ ಹಾಟ್‌ಸ್ಪಾಟ್‌ ಆಗಲಿದೆಯಾ ವಿಕ್ಟೋರಿಯಾ ಆಸ್ಪತ್ರೆ? ಪ್ರತ್ಯಕ್ಷ ವರದಿ!

ಇನ್ನು ಜಗತ್ತಿನಾದ್ಯಂತ ಒಟ್ಟು 1,518,719 ಜನರಲ್ಲಿ ಕೊರೊನಾ ದೃಢವಾಗಿದೆ. ಅದರಲ್ಲಿ 88,502 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 330,589 ಜನರು ಈ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಇಟಲಿಯಲ್ಲಿ 17,669 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಪೇನ್ ದೇಶದಲ್ಲಿ 14,792 ಜನರು ಸಾವನ್ನಪ್ಪಿದ್ದಾರೆ.

English summary
Increase of 540 new COVID19 cases and 17 deaths in last 24 hours; India's total number of Coronavirus positive cases rise to 5734.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X