• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನವದೆಹಲಿಯಲ್ಲಿ 5ನೇ ಮಂಕಿಪಾಕ್ಸ್ ಪ್ರಕರಣ ಪತ್ತೆ!

|
Google Oneindia Kannada News

ನವದೆಹಲಿ, ಆಗಸ್ಟ್ 13: ನವದೆಹಲಿಯಲ್ಲಿ ಕೊರೊನಾ ವೈರಸ್ ತಪ್ಪಿದರೆ ಮಂಕಿಪಾಕ್ಸ್ ರೋಗಗಳು ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಒಂದು ಕಡೆ ಕೋವಿಡ್-19 ಸಂಖ್ಯೆ ನಿತ್ಯ 2000 ಗಡಿ ದಾಟುತ್ತಿದ್ದರೆ, ಇದರ ಮಧ್ಯೆ ಐದನೇ ಮಂಕಿಪಾಕ್ಸ್ ಸೋಂಕಿತ ಪ್ರಕರಣ ವರದಿಯಾಗಿದೆ.

ಶನಿವಾರ 22 ವರ್ಷದ ಆಫ್ರಿಕನ್ ಮಹಿಳೆಗೆ ಮಂಕಿಪಾಕ್ಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ನವದೆಹಲಿ ಲೋಕನಾಯಕ್ ಜಯ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಗಿದೆ. ಒಂದು ತಿಂಗಳ ಹಿಂದೆ ಇದೇ ಮಹಿಳೆ ನೈಜೀರಿಯಾಗೆ ಪ್ರಯಾಣ ಬೆಳೆಸಿದ್ದರು ಎಂದು ತಿಳಿದು ಬಂದಿದೆ.

Monkeypox Do's And Don'ts: ಮಂಕಿಪಾಕ್ಸ್ ಕುರಿತು ಸುರಕ್ಷತೆ ಹೇಗೆ ಸಾಧ್ಯ?Monkeypox Do's And Don'ts: ಮಂಕಿಪಾಕ್ಸ್ ಕುರಿತು ಸುರಕ್ಷತೆ ಹೇಗೆ ಸಾಧ್ಯ?

ಎರಡು ದಿನಗಳ ಹಿಂದೆ ಮಹಿಳೆಯನ್ನು ಎಲ್‌ಎನ್‌ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ರಾತ್ರಿ ಆಕೆಯ ವರದಿಗಳು ಹೊರಬಂದಿದ್ದು, ಆಕೆಗೆ ಮಂಕಿಪಾಕ್ಸ್ ಸೋಂಕು ಪಾಸಿಟಿವ್ ಎಂದು ದೃಢಪಡಿಸಿದೆ. ಅವರು ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿಗೆ ಒಳಗಾದ ಎರಡನೇ ಮಹಿಳೆಯಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 10

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಸಂಖ್ಯೆ 10

ಭಾರತದಲ್ಲಿ ಒಟ್ಟು 10 ಮಂಕಿಪಾಕ್ಸ್ ರೋಗಿಗಳು ದಾಖಲಾಗಿದ್ದಾರೆ. ದೆಹಲಿಯ ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದರೆ, ಒಬ್ಬರು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿಗೆ ಆಸ್ಪತ್ರೆಗೆ ದಾಖಲಾದ ಮಹಿಳೆಯ ಆರೋಗ್ಯದ ಮೇಲ್ವಿಚಾರಣೆಯನ್ನು ವೈದ್ಯರ ತಂಡವು ನೋಡಿಕೊಳ್ಳುತ್ತಿದೆ ಎಂದು ಎಲ್‌ಎನ್‌ಜೆಪಿ ಆಸ್ಪತ್ರೆಯ ಡಾ.ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಕಿಪಾಕ್ಸ್ ಬಗ್ಗೆ ಎಚ್ಚರಿಕೆ ಸಂದೇಶ ನೀಡಿದ ಸಚಿವಾಲಯ

ಮಂಕಿಪಾಕ್ಸ್ ಬಗ್ಗೆ ಎಚ್ಚರಿಕೆ ಸಂದೇಶ ನೀಡಿದ ಸಚಿವಾಲಯ

ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯವು ರೋಗಕ್ಕೆ ತುತ್ತಾಗುವುದನ್ನು ತಪ್ಪಿಸಲು ಮಾಡಬೇಕಾದ ಮತ್ತು ಮಾಡಬಾರದ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಸೋಂಕಿತ ವ್ಯಕ್ತಿಯೊಂದಿಗೆ ದೀರ್ಘಕಾಲ ಅಥವಾ ಪುನರಾವರ್ತಿತ ಸಂಪರ್ಕವನ್ನು ಹೊಂದಿದ್ದರೆ ಯಾರಿಗಾದರೂ ವೈರಸ್ ಅಂಟಿಕೊಳ್ಳಬಹುದು ಎಂದು ಸಚಿವಾಲಯ ಒತ್ತಿ ಹೇಳಿದೆ.

ಜಗತ್ತಿನ 85ಕ್ಕೂ ಹೆಚ್ಚು ದೇಶಗಳಿಗೆ ಮಂಕಿಪಾಕ್ಸ್

ಜಗತ್ತಿನ 85ಕ್ಕೂ ಹೆಚ್ಚು ದೇಶಗಳಿಗೆ ಮಂಕಿಪಾಕ್ಸ್

ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಜಗತ್ತಿನ 85ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಸೇರಿ 20,000ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. "ತಮಗೆ ಸೋಂಕು ತಗುಲಿರುವ ಬಗ್ಗೆ ದೇಶಗಳು, ಸಮುದಾಯಗಳು ಮತ್ತು ಜನರು ಸ್ವಯಂಪ್ರೇರಿತರಾಗಿ ಮಾಹಿತಿ ನೀಡಿದರೆ ಹಾಗೂ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ, ಮಂಕಿಪಾಕ್ಸ್ ಸೋಂಕು ಹರಡುವಿಕೆಯನ್ನು ತಕ್ಷಣಕ್ಕೆ ತಡೆಯುವುದಕ್ಕೆ ಸಾಧ್ಯವಿದೆ," ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ ಟೆಡ್ರೊಸ್ ಗೆಬ್ರೆಯೆಸಸ್ ಹೇಳಿದ್ದಾರೆ.

ಮಂಕಿಪಾಕ್ಸ್ ರೋಗದ ಬಗ್ಗೆ ಜಾಗೃತಿ ವಹಿಸಿ

ಮಂಕಿಪಾಕ್ಸ್ ರೋಗದ ಬಗ್ಗೆ ಜಾಗೃತಿ ವಹಿಸಿ

ಮಂಕಿಪಾಕ್ಸ್ ಸಿಡುಬಿಗೆ ಸಂಬಂಧಿಸಿದ ಒಂದು ಪಾಕ್ಸ್‌ವೈರಸ್ ಆಗಿದ್ದು, ಸಾಮಾನ್ಯವಾಗಿ ಮೊಡವೆ ಅಥವಾ ಗುಳ್ಳೆಗಳಂತಹ ಗಾಯಗಳನ್ನು ಉಂಟು ಮಾಡುತ್ತದೆ. ಇದರ ಜೊತೆ ಜ್ವರ, ತಲೆನೋವು, ಸ್ನಾಯು ನೋವು, ಶೀತ ಮತ್ತು ಉಸಿರಾಟ ಸಮಸ್ಯೆ ತರಹದ ಲಕ್ಷಣಗಳು ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತವೆ. ವೈರಸ್ ನಿಕಟ ಮತ್ತು ಆಗಾಗ್ಗೆ ಚರ್ಮದಿಂದ ಚರ್ಮಕ್ಕೆ ಸಂಪರ್ಕ ಹೊಂದುವುದರಿಂದ ಯಾರಿಗಾದರೂ ಸೋಂಕು ಹರಡಬಹುದು. ಸೋಂಕಿತ ಪ್ರಾಣಿಗಳಿಂದ ಜನರು ಮಂಕಿಪಾಕ್ಸ್ ಸೋಂಕಿಗೆ ತುತ್ತಾಗುವ ಅಪಾಯವಿರುತ್ತದೆ.

English summary
5th monkeypox case reported in Delhi; woman with travel history to Nigeria tests positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X