Breaking: 'ಸೂರರೈ ಪೋಟ್ರು'ಗೆ ಶ್ರೇಷ್ಠ ಚಲನಚಿತ್ರ ರಾಷ್ಟ್ರಪ್ರಶಸ್ತಿ ಗರಿ!
ನವದೆಹಲಿ, ಜುಲೈ 22: ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್ ಏರ್ ಡೆಕ್ಕನ್ ಸಂಸ್ಥಾಪಕ ಕ್ಯಾಪ್ಟನ್ ಗೋಪಿನಾಥ್ ಅವರ ಜೀವನ ಆಧರಿಸಿದ ಸಿನಿಮಾ ಸೂರರೈ ಪೋಟ್ರುಗೆ ಶ್ರೇಷ್ಠ ಚಲನಚಿತ್ರ ರಾಷ್ಟ್ರಪ್ರಶಸ್ತಿ ದೊರೆತಿದೆ.
2020 ರಲ್ಲಿ ಬಿಡುಗಡೆಯಾದ ಚಲನಚಿತ್ರಗಳಿಗಾಗಿ ನವದೆಹಲಿಯಲ್ಲಿ ಶುಕ್ರವಾರ 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಯಿತು.
ನಟ ಸೂರ್ಯ ಅಭಿನಯದ ತಮಿಳು ಚಲನಚಿತ್ರ ಸೂರರೈ ಪೊಟ್ರು ಶ್ರೇಷ್ಠ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ನಟ ಸೂರ್ಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದರೇ, ನಾಯಕ ನಟಿ ಅಪರ್ಣಾ ಬಾಲಮುರಳಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.

ಇನ್ನು ಹಿಂದಿ ಚಿತ್ರ ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ಗಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಅಜಯ್ ದೇವಗನ್ ಪಡೆದಿದ್ದಾರೆ. ನಟ ಸೂರ್ಯ ಮತ್ತು ಅಜಯ್ ದೇವಗನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ತಾನ್ಹಾಜಿ ಚಿತ್ರವು ಅತ್ಯುತ್ತಮವಾದ ಜನಪ್ರಿಯ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.
ಬಿಜು ಮೆನನ್ ಅವರು ಅಯ್ಯಪ್ಪನುಂ ಕೊಶಿಯುಂ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದಾರೆ. ಶಿವರಂಜನಿಯುಂ ಇನ್ನುಮ್ ಸಿಲಾ ಪೆಂಗಲುಮ್ ಚಿತ್ರದಲ್ಲಿನ ಕೆಲಸಕ್ಕಾಗಿ ಲಕ್ಷ್ಮಿ ಪ್ರಿಯಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ನೀಡಲಾಗಿದೆ. ಈ ಚಿತ್ರ ಅತ್ಯುತ್ತಮ ತಮಿಳು ಚಲನಚಿತ್ರ ಮತ್ತು ಅತ್ಯುತ್ತಮ ಸಂಕಲನ ಪ್ರಶಸ್ತಿಯನ್ನು ಗೆದ್ದಿದೆ.

ಬಾಲನಟ ವರುಣ್ ಬುದ್ಧದೇವ್ ಅವರಿಗೆ ತೀರ್ಪುಗಾರರ ವಿಶೇಷ ಉಲ್ಲೇಖದೊಂದಿಗೆ ತುಳ್ಸಿದಾಸ್ ಜೂನಿಯರ್ ಅತ್ಯುತ್ತಮ ಹಿಂದಿ ಚಲನಚಿತ್ರ ಪ್ರಶಸ್ತಿಯನ್ನು ನೀಡಲಾಯಿತು.
ಕನ್ನಡದ 'ಡೊಳ್ಳು' ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಲನಚಿತ್ರ ಮತ್ತು ಅತ್ಯುತ್ತಮ ಸ್ಥಳ ಧ್ವನಿ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಅವಿಜಾಟ್ರಿಕ್ ಅತ್ಯುತ್ತಮ ಬಂಗಾಳಿ ಚಲನಚಿತ್ರ ಮತ್ತು ಅತ್ಯುತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದಿದೆ. ಕಲರ್ ಫೋಟೋ ಅತ್ಯುತ್ತಮ ತೆಲುಗು ಚಿತ್ರ, ತಿಂಕಲಜ್ಚ ನಿಶ್ಚಯಂ ಅತ್ಯುತ್ತಮ ಮಲಯಾಳಂ ಚಿತ್ರ ಪ್ರಶಸ್ತಿ ಪಡೆದಿದೆ. ಮಧ್ಯಪ್ರದೇಶವನ್ನು ಅತ್ಯಂತ ಚಲನಚಿತ್ರ ಸ್ನೇಹಿ ರಾಜ್ಯವಾಗಿ ಆಯ್ಕೆ ಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸಲಾಗುವುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications