ದೆಹಲಿಯಲ್ಲಿ 8 ತಿಂಗಳ ಹಸುಳೆಯ ಮೇಲೆ ಅತ್ಯಾಚಾರ
ನವದೆಹಲಿ, ಜನವರಿ 30: 27 ವರ್ಷದ ಯುವಕ 8 ತಿಂಗಳ ಶಿಶುವಿನ ಮೇಲೆ ಅತ್ಯಾಚಾರ ಎಸಗಿದ ಪರಿಣಾಮ ಮಗು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಹೃದಯವಿದ್ರಾವಕ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಮಗು ತೀವ್ರ ಅಸ್ವಸ್ಥಳಾಗಿದ್ದರಿಂದ ಆಕೆಯನ್ನು ಆಸ್ಪತ್ರೆಗೆ ಸೇರಿಸಿದಾಗ, ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ತಂದೆ ಮತ್ತು ತಾಯಿ ಇಬ್ಬರೂ ಉದ್ಯೋಗಸ್ಥರಾಘಿದ್ದರಿಂದ ಮಗುವನ್ನು ತಮ್ಮ ಸಂಬಂಧಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು. ಈ ಸಂದರ್ಭದಲ್ಲಿ ಸೋದರ ಸಂಬಂಧಿಯೇ ಮಗುವಿನ ಮೇಲೆ ಅತ್ಯಾಚಾರ ಎಸಗಿ ಅಮಾನವೀಯತೆ ಮೆರೆದಿದ್ದಾನೆ.
ಕೆಲಸ ಮುಗಿಸಿ ಮನೆಗೆ ಬಂದ ಮಗುವಿನ ತಾಯಿಗೆ ಮಗು ರಕ್ತ ಸಿಕ್ತ ದೇಹದೊಂದಿಗೆ ಹಾಸಿಗೆ ಮೇಲೆ ಬಿದ್ದಿರುವುದು ತಿಳಿದಿದೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಿದಾಗ ಮಗುವಿನ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದು. ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.












Click it and Unblock the Notifications