ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಮೋದಿ ಬಳಿ ವಿಪಕ್ಷಗಳ ಮನವಿ ಏನು?

|
Google Oneindia Kannada News

ನವದೆಹಲಿ, ಏಪ್ರಿಲ್ 8: ದೇಶದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ದೇಶಾದ್ಯಂತ ಹೇರಲಾಗಿರುವ ಲಾಕ್‌ಡೌನ್ ಏಪ್ರಿಲ್ 14 ರ ನಂತರವೂ ಮುಂದುವರೆಸಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಮುಖಂಡರ ಜೊತೆ ವಿಡಿಯೋ ಕಾನ್ಪರೆನ್ಸ್ ಸಂವಾದ ನಡೆಸಿದರು.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಅಜಾದ್ ಅವರು, ಪ್ರಧಾನಿ ನಮ್ಮೆಲ್ಲರ ಸಲಹೆ ಕೇಳಿದ್ದಾರೆ. ಶೇ 88 ರಷ್ಟು ವಿರೋಧ ಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಏಪ್ರಿಲ್ 14ರ ಬಳಿಕ ಲಾಕ್ ಡೌನ್ ತೆರವಿಗೆ ಸಿದ್ಧವಾಗಿದೆ ಸೂತ್ರಏಪ್ರಿಲ್ 14ರ ಬಳಿಕ ಲಾಕ್ ಡೌನ್ ತೆರವಿಗೆ ಸಿದ್ಧವಾಗಿದೆ ಸೂತ್ರ

ಕೆಲವು ವಿನಾಯಿತಿ ನೀಡಬೇಕು

ಕೆಲವು ವಿನಾಯಿತಿ ನೀಡಬೇಕು

ನಾವು ಪ್ರಧಾನಿಗೆ ಸಾಮಾನ್ಯ ಜನಕ್ಕೆ ಆಗುತ್ತಿರವ ಸಮಸ್ಯೆಗಳ ಬಗ್ಗೆಯೂ ಹೆಚ್ಚು ಗಮನ ಕೊಡಿ ಎಂದು ಸಲಹೆ ನೀಡಿದ್ದೇವೆ. ಆದರೆ, ಲಾಕ್‌ಡೌನ್ ನ್ನು ಹಾಟ್‌ಸ್ಪಾಟ್‌ ನಗರಗಳಲ್ಲಿ ಇನ್ನಷ್ಟು ಕಟ್ಟುನಿಟ್ಟುಗೊಳಿಸಿ, ಉಳಿದಂತೆ ಕೊರೊನಾ ಕಂಡು ಬರದ ಕಡೆಗೆ ಕೆಲವು ವಿನಾಯಿತಿ ನೀಡಬೇಕು ಎಂದು ಹೇಳಿದ್ದೇವೆ ಎಂದು ಅಜಾದ್ ಹೇಳಿದ್ದಾರೆ.

ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ

ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ

ಶೇ 88 ರಷ್ಟು ವಿರೋಧ ಪಕ್ಷಗಳು ಲಾಕ್‌ಡೌನ್ ಮುಂದುವರೆಸಬೇಕು ಎಂಬ ಬಗ್ಗೆ ಮೋದಿ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಲಾಕ್‌ಡೌನ್ ಮೇ ಏಪ್ರಿಲ್ ಅಂತ್ಯಂದವರೆಗೂ ಮುಂದುವರೆಯುತ್ತೆ ಎನ್ನುವ ವಿಶ್ವಾಸವಿದೆ ಎಂದು ಅಜಾದ್ ಅವರು ಹೇಳಿದ್ದಾರೆ.

ಏಪ್ರಿಲ್ 11 ರಂದು ಮುಖ್ಯಮಂತ್ರಿಗಳ ಸಭೆ

ಏಪ್ರಿಲ್ 11 ರಂದು ಮುಖ್ಯಮಂತ್ರಿಗಳ ಸಭೆ

ವಿಡಿಯೋ ಸಂವಾದದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಮುಖಂಡರ ಸಲಹೆ, ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಏಪ್ರಿಲ್ 11 ರಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕೂಡ ಕರೆದಿದ್ದಾರೆ. ಈ ಸಭೆ ಮುಗಿದ ನಂತರ ಲಾಕ್‌ಡೌನ್ ಬಗ್ಗೆ ಮೋದಿ ಅವರು ಅಂತಿಮ ನಿರ್ಧಾರ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

175 ಮಂದಿ ದೇಶದಲ್ಲಿ ಸಾವನ್ನಪ್ಪಿದ್ದಾರೆ

175 ಮಂದಿ ದೇಶದಲ್ಲಿ ಸಾವನ್ನಪ್ಪಿದ್ದಾರೆ

ಕೊರೊನಾ ಸೋಂಕಿನಿಂದ ಇದುವರೆಗೆ 149 ಮಂದಿ ದೇಶದಲ್ಲಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 32 ಮಂದಿ ಕೊರೊನಾದಿಂದ ಸಾವು. 24 ಗಂಟೆಯಲ್ಲಿ 773 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣ ದಾಖಲಾಗಿವೆ.

English summary
88 Per Cent All Opposition Parties Support For Lockdown Extension. Congress leader ghulam nabi azad said after pm modi video conference.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X