ನವದೆಹಲಿಯ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ: ಕಟ್ಟಡ ಕುಸಿತ
ನವದೆಹಲಿ, ಜನವರಿ 2: ನವದೆಹಲಿಯ ಕಾರ್ಖಾನೆಯೊಂದರಲ್ಲಿ ಬೆಂಕಿ ಕೆನ್ನಾಲಿಗೆ ತೆರೆದಿದ್ದು, ಫ್ಯಾಕ್ಟರಿ ಸುಟ್ಟು ಕರಕಲಾಗಿದ್ದಷ್ಟೇ ಅಲ್ಲದೆ ಫ್ಯಾಕ್ಟರಿ ಕಟ್ಟಡವೇ ಕುಸಿದಿದೆ.
ಪಶ್ಚಿಮ ದೆಹಲಿಯ ಪೀರಾ ಗರಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಕುಸಿದ ಪರಿಣಾಮ ಅಗ್ನಿ ಶಾಮಕ ಸಿಬ್ಬಂದಿ ಸೇರಿದಂತೆ ಹಲವರು ಕಟ್ಟಡದೊಳಗೆ ಸಿಲುಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಳಗಿನ ಜಾವ ಸುಮಾರು 4.30ಕ್ಕೆ ಅವಘಡ ಸಂಭವಿಸಿದ್ದು, ಏಳು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆಗೆಂದು ಬಂದಿದ್ದರು.ಬಳಿಕ 35 ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಬಂದಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದೆ. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.












Click it and Unblock the Notifications