Video: ದೆಹಲಿಯಲ್ಲಿ ಮೊಳಗಿದ ಗುಂಡಿನ ಸದ್ದು, 3 ದಿನ 2 ಬಾರಿ ಫೈರಿಂಗ್!

ನವದೆಹಲಿ, ಫೆಬ್ರವರಿ.01: ರಾಷ್ಟ್ರರಾಜಧಾನಿಯಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳೆದ ಮೂರು ದಿನಗಳಲ್ಲಿ ಎರಡನೇ ಬಾರಿ ಶಂಕಿತ ವ್ಯಕ್ತಿಯಿಂದ ದೆಹಲಿಯಲ್ಲಿ ಫೈರಿಂಗ್ ನಡೆದಿದೆ. ಈಗಾಗಲೇ ಶಂಕಿತನನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ದೆಹಲಿಯ ಶಾಹಿನ್ ಬಾಗ್ ನಲ್ಲಿ ಕಳೆದ 50 ದಿನಗಳಿಂದಲೂ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರನೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಇದೀಗ ಸಾಕಷ್ಟು ಸದ್ದು ಮಾಡಿದೆ.

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಪೌರತ್ವ ಕಾಯ್ದೆಯನ್ನು ವಿರೋಧಿಸಿ ಜಾಮಿಯಾ ಯುನಿವರ್ಸಿಟಿಯಿಂದ ರಾಜ್‍ಘಾಟ್‍ನಲ್ಲಿ ಇರುವ ಮಹಾತ್ಮ ಗಾಂಧಿ ಸ್ಮಾರಕದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದರು. ಈ ಸಮಯದಲ್ಲಿ ಅಲ್ಲಿ ಕಾಣಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದನು.

A Man Fired Bullets In Shaheen Bagh Area. Delhi Police Has Taken Him Into Their Custody

ಗಾಳಿಯಲ್ಲಿ ಗುಂಡು ಹಾರಿಸಿದ ಶಂಕಿತ:

ದೆಹಲಿಯ ಶಾಹಿನ್ ಬಾಗ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಸ್ಥಳದಲ್ಲಿ ಕಾಣಿಸಿಕೊಂಡ ಅಪರಿಚಿತ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ತಕ್ಷಣ ಎಚ್ಚೆತ್ತುಕೊಂಡ ದೆಹಲಿ ಪೊಲೀಸರು ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

"ದೇಶದಲ್ಲಿ ಬೇರೆ ಯಾರ ಆಟವೂ ನಡೆಯುವುದಿಲ್ಲ"

ಇನ್ನು, ಪೊಲೀಸರು ಶಂಕಿತನನ್ನು ವಶಕ್ಕೆ ಪಡೆಯುತ್ತಿರುವಾಗಲೂ ಶಂಕಿತವೂ ಘೋಷಣೆಗಳನ್ನು ಕೂಗಿದ್ದಾರೆ. ಭಾರತ ದೇಶದಲ್ಲಿ ಬೇರೆ ಯಾರ ಆಟವೂ ನಡೆಯುವುದಿಲ್ಲ. ಇಲ್ಲಿ ಹಿಂದೂಗಳದ್ದೇ ಆಟ ನಡೆಯುತ್ತದೆ ಎಂದು ಹೇಳಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+