ದೆಹಲಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಆರೋಪಿ ಬಂಧನ
ನವದೆಹಲಿ, ಜೂನ್ 27: ರೇಪ್ ಕ್ಯಾಪಿಟಲ್ ಎಂದು ಜಾಗತಿಕ ಮಟ್ಟದಲ್ಲಿ ಕುಖ್ಯಾತಿ ಹೊಂದಿದ ದೆಹಲಿಯಲ್ಲಿ, ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನನ್ನು ಇಂದು (ಜೂನ್ 27)ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ಥೆಯೇ ಪೊಲೀಸ್ ಠಾಣೆಗೆ ಕರೆ ಮಾಡಿ, ತನ್ನ ಮೇಲೆ ನಾಲ್ಕು ದಿನದ ಹಿಂದೆ ಅತ್ಯಾಚಾರ ನಡೆದಿರುವುದಾಗಿ ಹೇಳಿದ್ದು, ಆರೋಪಿಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಈ ಮಾಹಿತಿಯ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದ್ದು, ಪೋಕ್ಸೋ(Protection of Children from Sexual Offences Act) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಉತ್ತರ ಪ್ರದೇಶದ ಅಲಿಘಡ್ ನಲ್ಲಿಯೂ ಇತ್ತೀಚೆಗೆ ಆರು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆದಿತ್ತು. ಅದತ್ಯಾಚಾರ ನಡೆಸಿ, ಸಂತ್ರಸ್ತೆಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಸ್ಥಳಿಯರೇ ಹೊಡೆದು ಕೊಂದಿದ್ದರು.
ಬಿಹಾರದ ಪಾಟ್ನಾದಲ್ಲಿಯೂ ಇತ್ತೀಚೆಗಷ್ಟೇ 14 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ದುಷ್ಕರ್ಮಿಗಳು ಆಕೆಯನ್ನು ಚಲಿಸುತ್ತಿದ್ದ ರೈಲಿನಿಂದ ಬಿಸಾಡಿದ್ದರು, ಜೀವಚ್ಛವವಾಗಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು.
ಉತ್ತರ ಪ್ರದೇಶದ ಕನೌಜಿನಲ್ಲಿ ನಿಧಿಯ ಆಮಿಷವೊಡ್ಡಿ ಮಾಂತ್ರಿಕನೊಬ್ಬ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿ, ಕೊಲೆಗೈದಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications