ಪೊಲೀಸ್‌ ಕಾನ್ಸ್‌ಟೇಬಲ್ ಹೆಸರನ್ನು ಮಗುವಿಗಿಟ್ಟ ತಾಯಿ

ನವ ದೆಹಲಿ, ಏಪ್ರಿಲ್ 24: ದೆಹಲಿಯಲ್ಲಿ ಒಬ್ಬ ತಾಯಿ ತನ್ನ ಮಗುವಿಗೆ ಪೊಲೀಸ್‌ ಕಾನ್ಸ್‌ಟೇಬಲ್ ಹೆಸರನ್ನು ನಾಮಕರಣ ಮಾಡಿದ್ದಾರೆ. ಈ ಮೂಲಕ ಪೊಲೀಸ್‌ ಕಾನ್ಸ್‌ಟೇಬಲ್ ಸಹಾಯಕ್ಕೆ ಧನ್ಯವಾದ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಏರಲಾಗಿದೆ. ಹೀಗಾಗಿ ಆಸ್ಪತ್ರೆಗೆ ಹೋಗುವವರಿಗೂ ತೊಂದರೆಯಾಗಿದೆ. ದೆಹಲಿಯಲ್ಲಿ ಮಹಿಳೆಯೊಬ್ಬರು ಗರ್ಭಿಣಿಯಾಗಿದ್ದು, ಹೆಸರಿಗೆಗೆ ಆಸ್ಪತ್ರೆಗೆ ಹೋಗಬೇಕಿತ್ತು. ಆ ಸಮಯದಲ್ಲಿ ಅವರ ಸಹಾಯಕ್ಕೆ ಪೊಲೀಸ್‌ ಕಾನ್ಸ್‌ಟೇಬಲ್ ದಯಾವೀರ್ ಸಿಂಗ್ ಬಂದರು.

ದಯಾವೀರ್ ಸಿಂಗ್ ಸಹಾಯದಿಂದ ಮಹಿಳೆ ಆಸ್ಪತ್ರೆಗೆ ಸುರಕ್ಷಿತವಾಗಿ ತೆರಳಿದರು. ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯ ತಿಳಿಸಿದ್ದಾರೆ.

A Mother Named Her Newborn Baby The Name Of A Police Constable In Delhi

ಕಷ್ಟದ ಸಮಯದಲ್ಲಿ ಸಹಾಯ ಮಾಡಿದ ಪೊಲೀಸ್‌ ಕಾನ್ಸ್‌ಟೇಬಲ್‌ ದಯಾವೀರ್ ಸಿಂಗ್‌ಗೆ ಮಹಿಳೆ ಧನ್ಯವಾದ ತಿಳಿಸಿದ್ದು, ತನ್ನ ಮಗುವಿಗೆ ಅವರ ಹೆಸರನ್ನೆ ನಾಮಕರಣ ಮಾಡಿದ್ದಾರೆ. ಈ ರೀತಿ ಅವರ ಮಾನವೀಯತೆಯನ್ನು ನೆನೆದಿದ್ದಾರೆ.

A Mother Named Her Newborn Baby The Name Of A Police Constable In Delhi

ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಪೊಲೀಸ್‌ ಕಾನ್ಸ್‌ಟೇಬಲ್ ದಯಾವೀರ್ ಸಿಂಗ್ ''ಅಂತಹ ಸಮಯದಲ್ಲಿ ಅವರಿಗೆ ಸಹಾಯ ಮಾಡಿದ್ದಕ್ಕೆ ನನಗೆ ಖುಷಿಯಾಗಿತ್ತು. ಅವರು ನೀಡಿದ ಗೌರವವನ್ನು ಸ್ವೀಕರಿಸಲು ಹೆಮ್ಮೆಪಡುತ್ತೇನೆ'' ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+