Breaking: ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಸಿಕ್ಕಿಂ ಪೊಲೀಸ್

ನವದೆಹಲಿ, ಜುಲೈ 18: ನವದೆಹಲಿಯಲ್ಲಿ ನಿಯೋಜನೆಗೊಂಡ ಸಿಕ್ಕಿಂ ಪೊಲೀಸ್ ಸಿಬ್ಬಂದಿ ಇಂದು ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಯೋಧ ಗಾಯಗೊಂಡಿದ್ದಾರೆ.

ದೆಹಲಿಯ ಹೈದರ್‌ಪುರ ಪ್ರದೇಶದ ವಾಟರ್ ಪ್ಲಾಂಟ್‌ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನೆ ಕುರಿತು ಮತ್ತಷ್ಟು ಮಾಹಿತಿ ಬರಬೇಕಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂತಹದ್ದೇ ಎರಡು ಹತ್ಯೆಯ ಘಟನೆಗಳು ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) ಯೋಧನೊಬ್ಬ ತನ್ನ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ಘಟನೆ ಶನಿವಾರ ನಡೆದಿದೆ.

A Sikkim Police shot dead two of his colleagues

ಪ್ರತ್ಯೇಕ ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಆಕಸ್ಮಿಕ ಗ್ರೆನೇಡ್ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಭಾರತೀಯ ಸೇನಾ ಕ್ಯಾಪ್ಟನ್ ಮತ್ತು ಜೂನಿಯರ್ ಕಮಿಷನ್ಡ್‌ ಅಧಿಕಾರಿ (ಜೆಸಿಒ) ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+