ಟೆರರ್ ಫಂಡಿಂಗ್ ಪತ್ತೆ ಹಚ್ಚಲು ಆಧಾರ್-ಪ್ಯಾನ್ ಲಿಂಕ್ ಅವಶ್ಯ: ಕೇಂದ್ರ
ಇತ್ತೀಚೆಗೆ, ಆಧಾರ್ ಕಾರ್ಡ್ ಸಂಖ್ಯೆಯನ್ನು ಪ್ಯಾನ್ ಕಾರ್ಡ್ ಸಂಖ್ಯೆಗೆ ಲಿಂಕ್ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.
ನವದೆಹಲಿ, ಏಪ್ರಿಲ್ 3: ಆಧಾರ್ ಕಾರ್ಡ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ಜೋಡಿಸುವಂತೆ ಕೇಂದ್ರ ಸರ್ಕಾರವು ನಾಗರಿಕರಿಗೆ ನೀಡಿರುವ ಆದೇಶದ ಹಿಂದೆ, ಉಗ್ರರಿಗೆ ಸಂದಾಯವಾಗುತ್ತಿರುವ ಹಣದ ಮೂಲದ ಪತ್ತೆ ಹಚ್ಚುವ ಉದ್ದೇಶವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಇತ್ತೀಚೆಗೆ, ಆಧಾರ್ ಕಾರ್ಡ್ ಸಂಖ್ಯೆಯನ್ನು ಪ್ಯಾನ್ ಕಾರ್ಡ್ ಸಂಖ್ಯೆಗೆ ಲಿಂಕ್ ಮಾಡಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿದ್ದ ಸುಪ್ರೀಂ ಕೋರ್ಟ್, ಇದರ ಔಚಿತ್ಯವನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಈ ಸ್ಪಷ್ಟನೆಯನ್ನು ನೀಡಿದೆ.

Click it and Unblock the Notifications