Get Updates
Get notified of breaking news, exclusive insights, and must-see stories!

'ದಿ ಕಾಶ್ಮೀರ್ ಫೈಲ್ಸ್': ಅರವಿಂದ್ ಕೇಜ್ರಿವಾಲ್ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ನವದೆಹಲಿ ಮಾರ್ಚ್ 30: ಇತ್ತೀಚೆಗೆ ಬಿಡುಗಡೆಯಾದ ವಿವಾದಾತ್ಮಕ ಬಾಲಿವುಡ್ ಸಿನಿಮಾ 'ದಿ ಕಾಶ್ಮೀರ್ ಫೈಲ್ಸ್' ಕುರಿತು ಕೇಜ್ರಿವಾಲ್ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರಿಗೂ ಪೊಲೀಸರಿಗೂ ಘರ್ಷಣೆ ನಡೆದಿದೆ.

ಬಿಜೆಪಿ ನಾಯಕರು ಕೇಜ್ರಿವಾಲ್ ಕಾಶ್ಮೀರಿ ಹಿಂದೂಗಳ "ಹತ್ಯಾಕಾಂಡ" ವನ್ನು ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಮುಖ್ಯಮಂತ್ರಿ ಮನೆಗೆ ಭೇಟಿಗೆ ಅವಕಾಶ ನೀಡುವ ಮೂಲಕ ವಿಧ್ವಂಸಕ ಕೃತ್ಯ ಮತ್ತು ಹಿಂಸಾಚಾರವನ್ನು ಸುಗಮಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಲವಾರು ಹಿರಿಯ ನಾಯಕರು ಆರೋಪಿಸಿದ್ದಾರೆ.

ಬಿಜೆಪಿ ಧ್ವಜಗಳು ಮತ್ತು ಕಾಶ್ಮೀರಿ ಪಂಡಿತರಿಗೆ ಅವಮಾನವನ್ನು ಖಂಡಿಸುವ ಫಲಕಗಳನ್ನು ಹೊತ್ತ ಜನರ ದೊಡ್ಡ ಗುಂಪು ಮುಖ್ಯಮಂತ್ರಿಯ ನಿವಾಸದ ಹೊರಗೆ ಸೇರಿದೆ. ಅಲ್ಲಿ ಹಾಕಲಾದ ಬ್ಯಾರಿಕೇಡ್‌ ಅನ್ನು ತಳ್ಳಾಡುವ ಮೂಲಕ ಈ ಪ್ರತಿಭಟನಾಕಾರರ ಗುಂಪು ಪೊಲೀಸರೊಂದಿಗೆ ಘರ್ಷಣೆ ಮಾಡುವ ದೃಶ್ಯಗಳು ಕಂಡುಬಂದಿವೆ. ಜೊತೆಗೆ ಗೇಟ್‌ಗೆ ಕೇಸರಿ ಬಣ್ಣವನ್ನು ಹಚ್ಚಿದ್ದಾರೆ. ಅವರಲ್ಲಿ ಹಲವರು ಭದ್ರತಾ ಬ್ಯಾರಿಕೇಡ್ ಅನ್ನು ಜಿಗಿಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು.

ಮಾತ್ರವಲ್ಲದೆ ಉದ್ರಿಕ್ತ ಗುಂಪು ಕೇಜ್ರಿವಾಲ್ ಅವರ ಮನೆಯ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತು ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ಕೇಜ್ರಿವಾಲ್ ಮನೆಯ ಪ್ರವೇಶ ದ್ವಾರದಲ್ಲಿ ಗಲಭೆ ಸೃಷ್ಟಿಸಿದವರು "ಬಿಜೆಪಿ ಗೂಂಡಾಗಳು" ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಬರೆದಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ 'ದಿ ಕಾಶ್ಮೀರ್ ಫೈಲ್ಸ್' ಕುರಿತು ಅವರು ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಸುಮಾರು 150-200 ಪ್ರತಿಭಟನಾಕಾರರು ಬೆಳಿಗ್ಗೆ 11:30 ರ ಸುಮಾರಿಗೆ ಸಿಎಂ ಅವರ ನಿವಾಸದ ಮುಂದೆ ಪ್ರತಿಭಟಿಸಿದರು. ತಕ್ಷಣ ಅವರನ್ನು ಸ್ಥಳದಿಂದ ಚದುರಿಸಲು ಸುಮಾರು 70 ಜನರನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳುತ್ತಾರೆ. ಇನ್ನೂ ಸಿಸಿಟಿವಿ ಒಡೆದು ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

The Kashmir Files Row : AAP alleged that the BJP protesters attacked the CM Arvind Kejriwals residence

'ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಎರಡು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ಮನೆಯನ್ನು ತಲುಪಿದರು. ಅಲ್ಲಿ ಗದ್ದಲವನ್ನು ಸೃಷ್ಟಿಸುವ ಮೂಲಕ ಘೋಷಣೆಗಳನ್ನು ಕೂಗಿದರು. ಜೊತೆಗೆ ಅವರು ಸಿಸಿಟಿವಿ ಕ್ಯಾಮೆರಾವನ್ನು ಸಹ ಧ್ವಂಸಗೊಳಿಸಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.

The Kashmir Files Row : AAP alleged that the BJP protesters attacked the CM Arvind Kejriwals residence

ದೆಹಲಿಯ ಬಿಜೆಪಿ ಶಾಸಕರು ರಾಷ್ಟ್ರ ರಾಜಧಾನಿಯಲ್ಲಿ "ದಿ ಕಾಶ್ಮೀರ್ ಫೈಲ್ಸ್" ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸುವ ಬೇಡಿಕೆಗೆ ಪ್ರತಿಕ್ರಿಯಿಸಿದ ಅರವಿಂದ್ ಕೇಜ್ರಿವಾಲ್, 'ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ತೆರಿಗೆ ಮುಕ್ತವಾಗಿಸುವುದಕ್ಕಿಂತ ಅದನ್ನು ಉಚಿತವಾಗಿ ಯೂಟ್ಯೂಬ್‌ನಲ್ಲಿ ಹಾಕಿ. ಆಗ ಅದನ್ನು ಎಲ್ಲರೂ ಉಚಿತವಾಗಿ ಒಟ್ಟಿಗೆ ನೀಡಬಹುದು' ಎಂದು ವ್ಯಂಗ್ಯವಾಡಿದ್ದರು.

"ಅವರು ಕಾಶ್ಮೀರ ಫೈಲ್‌ಗಳನ್ನು ತೆರಿಗೆ ಮುಕ್ತಗೊಳಿಸಿ ಎಂದು ಹೇಳುತ್ತಿದ್ದಾರೆ. ಸರಿ, ಅದನ್ನು ಯೂಟ್ಯೂಬ್‌ನಲ್ಲಿ ಹಾಕಿ ಅದು ಉಚಿತವಾಗಿರುತ್ತದೆ" ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ ಹೇಳಿಕೆ ವಿಧಾನಸಭಾ ಸದಸ್ಯರ ನಗು ಮತ್ತು ಡೆಸ್ಕ್‌ಗಳ ಬಡಿತಕ್ಕೆ ಕಾರಣವಾಯ್ತು.

"ನಮ್ಮನ್ನು ತೆರಿಗೆ ಮುಕ್ತ ಮಾಡು ಎಂದು ಏಕೆ ಕೇಳುತ್ತಿದ್ದೀರಿ. ಇಷ್ಟು ಉತ್ಸುಕನಾಗಿದ್ದರೆ ವಿವೇಕ್ ಅಗ್ನಿಹೋತ್ರಿಯವರಿಗೆ ಯೂಟ್ಯೂಬ್‌ನಲ್ಲಿ ಹಾಕಲು ಹೇಳಿ, ಆಗ ಎಲ್ಲರೂ ಉಚಿತವಾಗಿ ಸಿನಿಮಾವನ್ನು ನೋಡಬಹುದು. ಮಾತ್ರವಲ್ಲದೆ ಎಲ್ಲರೂ ಅದನ್ನು ಒಂದೇ ದಿನದಲ್ಲಿ ನೋಡಬಹುದು" ಎಂದು ಕೇಜ್ರಿವಾಲ್ ಹೇಳಿದ್ದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಹೆಚ್ಚಿನ ಪ್ರಶಂಸೆಗೆ ಒಳಗಾಗಿದ್ದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಉಗ್ರಗಾಮಿತ್ವದ ಉತ್ತುಂಗದಲ್ಲಿ ಕಾಶ್ಮೀರಿ ಕಣಿವೆಯಿಂದ ಕಾಶ್ಮೀರಿ ಹಿಂದೂಗಳ ವಲಸೆಯನ್ನು ಆಧರಿಸಿದೆ. ಹೀಗಾಗಿ ಇದಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ.

ದೇಶದಾದ್ಯಂತ ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಅಗಾಧವಾದ ಬೆಂಬಲ ಮತ್ತು ತೆರಿಗೆ ವಿನಾಯಿತಿಗಳ ಮೇಲೆ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ಜನಮೆಚ್ಚುಗೆ ಪಡೆದುಕೊಂಡಿದೆ. ವಿವಾದಾತ್ಮಕ ಚಲನಚಿತ್ರವು ರನ್ ಅವೇ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸನ್ನು ಗಳಿಸಿದೆ. 300 ಕೋಟಿಗಳಷ್ಟು ಸಂಗ್ರಹಮಾಡಿದೆ. ಇದಲ್ಲದೆ ಚಿತ್ರದ ಸೂಕ್ಷ್ಮತೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಿನಿಮಾದಲ್ಲಿ ಉದ್ದೇಶಪೂರ್ವಕವಾಗಿ ಸತ್ಯಗಳನ್ನು ತಪ್ಪಾಗಿ ನಿರೂಪಿಸಿರುವ ಆರೋಪಗಳು ಕೇಳಿ ಬಂದಿವೆ. ಇದರಿಂದಾಗಿ CRPF ಕವರ್ ಪ್ಯಾನ್ ಇಂಡಿಯಾದೊಂದಿಗೆ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಕೇಂದ್ರವು 'Y' ವರ್ಗದ ಭದ್ರತೆಯನ್ನು ಒದಗಿಸಿದೆ. ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ, ದರ್ಶನ್ ಕುಮಾರ್ ಮತ್ತು ಇತರರು ನಟಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+