ಸಿಬಿಐಗೆ ಕಪಿಲ್ ಮಿಶ್ರಾ ದೂರು, ಕೇಜ್ರಿ ಮನೆ ಮುಂದೆ ಬಿಜೆಪಿ ಪ್ರತಿಭಟನೆ

ನವದೆಹಲಿ, ಮೇ 9: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಸಾಕ್ಷಿ ಸಮೇತ ಕಪಿಲ್ ಮಿಶ್ರಾ ಸಿಬಿಐ ಕಚೇರಿಗೆ ದೂರು ನೀಡಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಸೋಮವಾವಾರವಷ್ಟೇ ದಾಖಲೆಗಳನ್ನು ನೀಡಿದ್ದ ಉಚ್ಛಾಟಿತ ಸಚಿವ ಮಿಶ್ರಾ ಇದೀಗ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.

ಇನ್ನು ಮಂಗಳವಾರ ಮಾತನಾಡಿರುವ ಕಪಿಲ್ ಮಿಶ್ರಾ, ಎಎಪಿ ಶಾಸಕರು ತಮ್ಮ ವಿದೇಶಿ ಪ್ರವಾಸದ ವಿವರಗಳನ್ನು ಬಹಿರಂಗಪಡಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಹೇಳಿದ್ದಾರೆ. ಮಾತ್ರವಲ್ಲ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂಬ ಹೊಸ ಬೇಡಿಕೆ ಮುಂದಿಟ್ಟಿದ್ದಾರೆ.

AAP crisis: Kapil Mishra approaches CBI, BJP protests outside Kejriwal's residence

ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ

ಇದೇ ವೇಳೆ ಮುಖ್ಯಮಂತ್ರಿ ಕೇಜ್ರಿವಾಲ್ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಭಾರೀ ಪ್ರತಿಭಟನೆಯಲ್ಲಿ ತೊಡಗಿರುವ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಬಳಸುತ್ತಿದ್ದಾರೆ. ಆದರೆ ಪ್ರತಿಭಟನಾಕಾರರು ಮಾತ್ರ ನಿವಾಸದ ಮುಂಭಾಗ ಬಿಟ್ಟು ಕದಲುತ್ತಿಲ್ಲ.

ಲಂಚ ಪ್ರಕರಣ, ಹಾಗೂ ಭೂ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇನ್ನು ಇಂದು ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಮಧ್ಯಾಹ್ನ ಎರಡು ಗಂಟೆಗೆ ಕರೆಯಲಾಗಿದೆ. ಇಲ್ಲೂ ವಿಧಾನಸಭೆ ಕಟ್ಟಡದ ಹೊರಗೂ ಪ್ರತಿಭಟನೆಗಳು ನಡೆಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+