ಸುಳ್ಳುಗಾರರ ಪಟ್ಟಿಯಲ್ಲಿಎಎಪಿಗೆ ಅಗ್ರಸ್ಥಾನ: ಅಮಿತ್ ಶಾ

Recommended Video

      ದೆಹಲಿ ಸರ್ಕಾರ ದೇಶದಲ್ಲೇ ನಂ 1 ಯಾಕೆ ಗೊತ್ತಾ..? | Oneindia Kannada

      ನವದೆಹಲಿ, ಜನವರಿ 26: "ಸುಳ್ಳುಗಾರರ ಪಟ್ಟಿಯನ್ನು ತಯಾರಿಸಿದರೆ ಅದರಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರು ಅಗ್ರಸ್ಥಾನದಲ್ಲಿರುತ್ತಾರೆ" ಎಂದು ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಚುನಾವಣಾ ಭಾಷಣದಲ್ಲಿ ಹೇಳಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗಾಗಿ ಬಿಜೆಪಿ v/s ಎಎಪಿ ನಡುವಿನ ಪ್ರಚಾರ ಭಾಷಣ ಬಿಸಿ ದಿನದಿಂದ ದಿನಕ್ಕೆ ಜೋರಾಗುತ್ತಿದೆ.

      "ಹತ್ತು ಹಲವು ಸಮೀಕ್ಷೆಗಳನ್ನು ದೇಶದಲ್ಲಿ ನಡೆಸಲಾಗಿದೆ. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ, ರಸ್ತೆ, ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಹಿನ್ನಡೆ, ವಿದ್ಯುತ್ ಪೂರೈಕೆಯಲ್ಲಿ ಅಸಮರ್ಪಕ ವ್ಯವಸ್ಥೆ ಇದ್ದರೆ ಅದು ಕೇಜ್ರಿವಾಲ್ ಸರ್ಕಾರದಲ್ಲಿ ಮಾತ್ರ, ಸುಳ್ಳು ಹೇಳಿಕೊಂಡು ಜನರನ್ನು ಮೋಸ ಮಾಡುವುದರಲ್ಲಿ ಕೇಜ್ರಿವಾಲ್ ನಿಸ್ಸೀಮರು" ಎಂದು ಅಮಿತ್ ಶಾ ಹೇಳಿದರು.

      ಎಎಪಿ ಅಲ್ಲದೆ ಕಾಂಗ್ರೆಸ್ ವಿರುದ್ಧವೂ ಕಿಡಿ ಕಾರಿದ ಅಮಿತ್ ಶಾ, ದೆಹಲಿಯಲ್ಲಿನ ಹಿಂಸಾಚಾರ, ಅನಗತ್ಯ ಪ್ರತಿಭಟನೆಗಳಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜನತೆಯಲ್ಲಿ ಗೊಂದಲ ಮೂಡುವಂತೆ ಕಾಂಗ್ರೆಸ್ ಮಾಡಿದೆ ಎಂದರು.

      AAP government tops chart of liars: Amit Shah slams Arvind Kejriwal

      "ರಾಹುಲ್ ಬಾಬಾ ಹಾಗೂ ಕೇಜ್ರಿವಾಲ್ ಹಾಗೂ ಕೋ ಸಿಎಎ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಾರೆ, ದೆಹಲಿ ಇಂಥವರ ಕೈಯಲ್ಲಿ ಸುರಕ್ಷಿತವಾಗಿರಲು ಹೇಗೆ ಸಾಧ್ಯ" ಎಂದು ಅಮಿತ್ ಪ್ರಶ್ನಿಸಿದರು.

      2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ.

      ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು

      ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ. ದೆಹಲಿಯಲ್ಲಿ ಜನವರಿ 14ರಿಂದ ಚುನಾವಣಾ ಆಯೋಗ ಅಧಿಸೂಚನೆ ಜಾರಿಯಾಗಲಿದೆ. ಜನವರಿ 24ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆಯಬಹುದು. ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+