ಎಎಪಿ ತೊರೆದು ಬಿಜೆಪಿ ಸೇರಿದ ದೆಹಲಿಯ ಮತ್ತೊಬ್ಬ ಶಾಸಕ
ನವದೆಹಲಿ, ಮೇ 06: ಲೋಕಸಭೆ ಚುನಾವಾಣೆ ವೇಳೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.ಗಾಂಧಿನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಅನಿಲ್ ಬಾಜಪೇಯಿ ಅವರು ಬಿಜೆಪಿ ಸೇರಿದ ಬೆನ್ನಲ್ಲೇ ಮತ್ತೊಬ್ಬ ಎಎಪಿ ಶಾಸಕರು ಬಿಜೆಪಿ ಸೇರಿದ್ದಾರೆ.
ಎಎಪಿ ಶಾಸಕ ದೇವೇಂದ್ರ ಸಿಂಗ್ ಶೆರಾವತ್ ಅವರು ಸೋಮವಾರದಂದು ಬಿಜೆಪಿ ಹಿರಿಯ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಬಿಜ್ವಾಸನ್ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.
ಆಮ್ ಆದ್ಮಿ ಪಕ್ಷದ ಶಾಸಕರು ಪಕ್ಷ ತೊರೆಯಲು ಸಿದ್ಧರಿದ್ದಾರೆ ಎಂದು ಬಿಜೆಪಿ ಮುಖಂಡ, ಕೇಂದ್ರ ಸಚಿವ ವಿಜಯ್ ಗೋಯೆಲ್ ಅವರು ಹೇಳಿದಂತೆ ಎಎಪಿ ತೊರೆದು ಬಿಜೆಪಿ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಬಿಜೆಪಿಯು ಎಎಪಿಯ ಕೆಲವು ಶಾಸಕರಿಗೆ 10 ಕೋಟಿ ರೂ. ಆಮಿಷವೊಡ್ಡಿ ಅವರನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು.
ಎಎಪಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಅವರು ಬಿಜೆಪಿಯ ಲೋಕಸಭೆ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸುವುದಾಗಿ ಗುರುವಾರದಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. ಎಎಪಿಯಿಂದ ಅಮಾನತುಗೊಂಡಿರುವ ಪಂಜಾಬಿನ ಹಾಲಿ ಶಾಸಕ ಹರೀಂದರ್ ಸಿಂಗ್ ಖಲ್ಸಾ ಅವರು ಮಾರ್ಚ್ ತಿಂಗಳಿನಲ್ಲಿ ಬಿಜೆಪಿ ಸೇರಿದ್ದರು.












Click it and Unblock the Notifications