ದೆಹಲಿಯಲ್ಲಿ ತೆರವು ಕಾರ್ಯಚರಣೆ: ಎಎಪಿ ಶಾಸಕರ ಪ್ರತಿಭಟನೆ
ನವದೆಹಲಿ ಮೇ 18: ಕೆಲ ದಿನಗಳಿಂದ ನಡೆಯುತ್ತಿರುವ ದೆಹಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಚರಣೆಯನ್ನು ವಿರೋಧಿಸಿ ಇಂದು ಎಎಪಿ ಶಾಸಕರು ಪ್ರತಿಭಟನೆ ಮಾಡಿದರು. ದಾಖಲಾತಿಗಳಿದ್ದರೂ ಕಟ್ಟಡಗಳನ್ನು ತೆರವುಗೊಳಿಸುತ್ತಿರುವುದರ ವಿರುದ್ಧ ಶಾಸಕರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು.
ರಾಷ್ಟ್ರ ರಾಜಧಾನಿ ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿದೆ. ಈ ಹಿಂದೆ ಜಹಾಂಗೀರ್‌ಪುರಿ ಪ್ರದೇಶದಲ್ಲೂ ಬುಲ್ಡೋಜರ್‌ಗಳಿಂದ ಅಕ್ರಮ ಕಟ್ಟಡಗಳನ್ನು ಕೆಡವಲಾಗಿತ್ತು. ಈ ವಿಷಯವನ್ನು ನ್ಯಾಯಾಲಯದ ಮುಂದಿಡಲಾಗಿದ್ದರೂ ಈಗ ಕಲ್ಯಾಣಪುರಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ ನಡೆಯುತ್ತಿದೆ. ಇದನ್ನು ಆಡಳಿತಾರೂಢ ಆಮ್ ಆದ್ಮಿ ಪಕ್ಷ ವಿರೋಧಿಸಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಪ್ರಭಾವವನ್ನು ಹೊಂದಿದ್ದು ಅದರ ಕುತಂತ್ರದಿಂದ ಈ ತೆರವು ಕಾರ್ಯಚರಣೆ ನಡೆದಿದೆ ಎಂದು ಆಪ್ ಆರೋಪಿಸಿದೆ. ಎಎಪಿ ಸರ್ಕಾರ ನಗರಸಭೆಯ ಬುಲ್ಡೋಜರ್ ಕ್ರಮಕ್ಕೆ ಭಾರೀ ವಿರುದ್ಧ ವ್ಯಕ್ತಪಡಿಸಿದೆ.
ಅತಿಕ್ರಮಣ ವಿರೋಧಿ ಕ್ರಮ
ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ಇಂದು ನಡೆದ ಅತಿಕ್ರಮಣ ವಿರೋಧಿ ಅಭಿಯಾನದ ವೇಳೆ ಎಎಪಿ ಶಾಸಕ ಕುಲದೀಪ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದರುತು. ಬಳಿಕ ಮಾತನಾಡಿದ ಅವರು, "ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎಂಸಿಡಿ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ.

ಅವರ ಮನೆ ಮತ್ತು ಅಂಗಡಿಗಳನ್ನು ತೆಗೆಯುವ ಉದ್ದೇಶ ಹೊಂದಿರುವ ಸರ್ಕಾರ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುತ್ತಿದ್ದರೆ, ಈ ಜನರ ಬಳಿ ಮಾನ್ಯ ದಾಖಲೆಗಳಿವೆ. ಅದನ್ನು ಪರಿಶೀಲಿಸಲಿಸಿ. ನಾವು ಅವರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ'' ಎಂದು ಅವರು ಹೇಳಿದ್ದಾರೆ.
#WATCH | Anti-encroachment drive underway in Delhi's Kalyanpuri area. pic.twitter.com/EfciXcWBtY
— ANI (@ANI) May 18, 2022
ಆಪ್ ಪಂಜಾಬ್‌ನಲ್ಲೂ ಅಕ್ರಮ ಕಟ್ಟ ತೆರವು ಕಾರ್ಯಚರಣೆ
ಆಮ್ ಆದ್ಮಿ ಪಕ್ಷದ ಪಂಜಾಬ್ ಸರ್ಕಾರ ಪಂಜಾಬ್‌ನಲ್ಲಿನ ಅತಿಕ್ರಮಣವನ್ನು ತೆಗೆದುಹಾಕುವ ಅಭಿಯಾನವನ್ನು ಪ್ರಾರಂಭಿಸಿದೆ. ಹೀಗಿರುವಾಗ ಆಮ್ ಆದ್ಮಿ ಪಕ್ಷ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಕ್ರಮದಿಂದ ಎಎಪಿ ಅಸಮಾಧಾನಗೊಂಡಿದ್ದು, ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಆದರೆ ಪಂಜಾಬ್‌ನಲ್ಲಿ ಭಗವಂತ್ ಮಾನ್ ಅವರೇ ಸಾವಿರಾರು ಎಕರೆ ಭೂಮಿ ಒತ್ತುವರಿಯನ್ನು ತೆಗೆದುಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗಳು ಬಿಜೆಪಿಯಿಂದ ಎದ್ದಿವೆ. ಪಂಜಾಬ್‌ನ ಜನರು ಸ್ವತಃ ಅತಿಕ್ರಮಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಎಎಪಿ ಹ್ಯಾಂಡಲ್‌ನಲ್ಲಿ ಹೇಳಲಾಗಿದೆ ಎಂದು ಬಿಜೆಪಿ ತಿಳೀಸಿದೆ.
(ಒನ್ಇಂಡಿಯಾ ಸುದ್ದಿ)
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications