ಆಕ್ಸಿಜನ್ ಹೆಚ್ಚಳ ವರದಿ: ಆಪ್ vs ಕೇಂದ್ರ ಸರ್ಕಾರ
ನವದೆಹಲಿ, ಜೂ.26: ಕೋವಿಡ್ -19 ರ ಕೊನೆಯ ಅಲೆಯ ಸಂದರ್ಭದಲ್ಲಿ ದೆಹಲಿಯ ಆಮ್ಲಜನಕದ ಪರಿಸ್ಥಿತಿಯನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿಯ ಇಬ್ಬರು ಸದಸ್ಯರು ಮಧ್ಯಂತರ ವರದಿಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಕೋವಿಡ್ ಬಿಕ್ಕಟ್ಟಿನ ನಡುವೆ ದೆಹಲಿ ಸರ್ಕಾರವು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಆಮ್ಲಜನಕವನ್ನು ಕೇಳಿತ್ತು ಎಂದು ಸುಪ್ರೀಂ ಕೋರ್ಟ್ ಸಮಿತಿ ವರದಿಯಲ್ಲಿ ತಿಳಿಸಿತ್ತು.
ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಸುಪ್ರೀಂ ಕೋರ್ಟ್‌ನ ಈ ಸಮಿತಿಯ ನೇತೃತ್ವ ವಹಿಸಿದ್ದ ಏಮ್ಸ್ ನಿರ್ದೇಶಕ ರಣ್ದೀಪ್ ಗುಲೇರಿಯಾ, ''ದೆಹಲಿ ಆಮ್ಲಜನಕ ಆಡಿಟ್ ಸಮಿಯ ಮಧ್ಯಂತರ ವರದಿಯಾಗಿದೆ. ನಾವು ದೆಹಲಿಯಲ್ಲಿ ನಾಲ್ಕು ಮಟ್ಟು ಹೆಚ್ಚು ಆಕ್ಸಿಜನ್ ಬೇಡಿಕೆ ಇರಿಸಲಾಗಿದೆ ಎಂದು ಹೇಳಲಾಗದು,'' ಎಂದು ಹೇಳುವ ಮೂಲಕ ಗೊಂದಲ ಉಂಟು ಮಾಡಿದ್ದಾರೆ.
ಸುಪ್ರೀಂ ಕೋರ್ಟ್‌ನ ಈ ಸಮಿತಿಯು ಏಮ್ಸ್ ನಿರ್ದೇಶಕ ರಣ್ದೀಪ್ ಗುಲೇರಿಯಾ ನೇತೃತ್ವದ್ದಾಗಿದ್ದು, ಈ ಸಮಿತಿಯಲ್ಲಿ ದೆಹಲಿ ಸರ್ಕಾರದ ಪ್ರಧಾನ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ, ಮ್ಯಾಕ್ಸ್ ಹೆಲ್ತ್‌ಕೇರ್ ನಿರ್ದೇಶಕ ಸಂದೀಪ್ ಬುದ್ಧಿರಾಜ ಮತ್ತು ಕೇಂದ್ರ ಜಲಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬೋಧ್ ಯಾದವ್ ಇದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ್ದ ಸಮಿತಿಯ ಇಬ್ಬರು ಸದಸ್ಯರು ಮಧ್ಯಂತರ ವರದಿಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಮ್ಯಾಕ್ಸ್ ಹೆಲ್ತ್‌ಕೇರ್‌ನ ಕ್ಲಿನಿಕಲ್ ನಿರ್ದೇಶಕ ಡಾ. ಸಂದೀಪ್ ಬುಧಿರಾಜ ಹಾಗೂ ದೆಹಲಿ ಸರ್ಕಾರದ ಪ್ರಧಾನ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ ಈ ವರದಿಗೆ ಆಕ್ಷೇಪ ವ್ಯಕ್ತಪಡಿಸಿದವರು.
ನಾವು ಈ ವರದಿಯನ್ನು ಒಪ್ಪುವುದಿಲ್ಲ ಎಂದು ಹೇಳಿರುವ ಇಬ್ಬರು, ಆಮ್ಲಜನಕದ ಅವಶ್ಯಕತೆ ಅತಿಯಾಗಿ ಇದ್ದದ್ದು ನಿಜ ಎಂದಿದ್ದಾರೆ. ಈ ಗುಂಪಿನ ಓರ್ವರಾದ ಭಲ್ಲಾ, ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ''ಈ ವರದಿಯಲ್ಲಿ ಆಕ್ಷೇಪಣೆಗಳು ಮತ್ತು ತಿದ್ದುಪಡಿಗಳನ್ನು ಸೇರಿಸಲಾಗಿಲ್ಲ. ಈ ವರದಿಗೆ ಉಪಗುಂಪಿನ ಎಲ್ಲಾ ಸದಸ್ಯರು ಅನುಮೋದನೆ ನೀಡಿಲ್ಲ,'' ಎಂದು ಹೇಳಿದ್ದಾರೆ. ಇದು ಪೂರ್ವ ನಿರ್ಧರಿತ ತೀರ್ಮಾನ ಎಂದು ದೂರಿದ್ದಾರೆ.
ಇನ್ನು ಇನ್ನೋರ್ವ ಸದಸ್ಯ ಡಾ. ಬುಧಿರಾಜ, ಮಧ್ಯಂತರ ಕರಡು ವರದಿಯಲ್ಲಿ ಬದಲಾವಣೆಗಳನ್ನು ಮತ್ತು ಸೇರ್ಪಡೆಗಳನ್ನು ಕೋರಿದ್ದರು. ಆದರೆ ಇದನ್ನು ಸೇರ್ಪಡೆ ಮಾಡಿಲ್ಲ ಎಂದು ಹೇಳಲಾಗಿದೆ.
ಪ್ರತಿ ಬೆಡ್ಗೆ ಆಮ್ಲಜನಕ ಬಳಕೆ 289 ಮೆಟ್ರಿಕ್ ಟನ್ ಆಗಿದೆ. ಆದರೆ ದೆಹಲಿ ಸರ್ಕಾರವು ಇದರ ನಾಲ್ಕು ಪಟ್ಟು ಆಮ್ಲಜನಕವನ್ನು ಕೇಳಿತ್ತು. ಅಂದರೆ 1,140 ಮೆಟ್ರಿಕ್ ಟನ್ ಅಗತ್ಯವಿದೆ ಎಂದು ದೆಹಲಿ ಸರ್ಕಾರ ಹೇಳಿತ್ತು ಎಂದು ಸುಪ್ರೀಂಕೋರ್ಟ್ ನಿಯುಕ್ತ ಆಕ್ಸಿಜನ್ ಲೆಕ್ಕ ಪರಿಶೋಧನಾ ಸಮಿತಿ ಶುಕ್ರವಾರ ತನ್ನ ಮಧ್ಯಂತರ ವರದಿಯಲ್ಲಿ ಹೇಳಿದೆ.
ಈ ಸಮಿತಿಯು ತನ್ನ ವರದಿಯಲ್ಲಿ, ''ದೆಹಲಿಯಲ್ಲಿ ಆಮ್ಲಜನಕದ ಸರಾಸರಿ ಬಳಕೆ 284 ರಿಂದ 372 ಮೆ.ಟನ್ ಆಗಿದೆ. ಆದರೆ ಸರ್ಕಾರ 1,140 ಮೆಟ್ರಿಕ್ ಟನ್ ಆಮ್ಲಜನಕ ಕೋರಿತ್ತು. ದೆಹಲಿಗೆ ಆಮ್ಲಜನಕದ ಹೆಚ್ಚುವರಿ ಪೂರೈಕೆಯು ಆಮ್ಲಜನಕದ ಅಗತ್ಯವಿರುವ ಇತರ ರಾಜ್ಯಗಳ ಮೇಲೆ ಪರಿಣಾಮ ಬೀರಿತ್ತು,'' ಎಂದು ಕೂಡಾ ಉಲ್ಲೇಖಿಸಿದೆ.
ಇನ್ನು ಈ ಬಗ್ಗೆ ಮಾತನಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, "ನಾವು ಲೆಕ್ಕಪರಿಶೋಧನಾ ಸಮಿತಿಯ ಸದಸ್ಯರೊಂದಿಗೆ ಮಾತನಾಡಿದ್ದೇವೆ. ಅಂತಹ ಯಾವುದೇ ವರದಿಗೆ ಸದಸ್ಯರು ಸಹಿ ಮಾಡಿಲ್ಲ ಅಥವಾ ಅಂಗೀಕರಿಸಿಲ್ಲ ಎಂದು ತಿಳಿಸಿದ್ದಾರೆ. ಇದು ಬಿಜೆಪಿ ಮಾಡಿದ ಒಂದು ಚೇಷ್ಟೆಯ ಕೃತ್ಯ. ಇದು ಸಂಪೂರ್ಣ ಸುಳ್ಳು. ಬಿಜೆಪಿಗೆ ನಾಚಿಕೆಯಾಗಬೇಕು," ಎಂದು ಟೀಕಿಸಿದ್ದಾರೆ.
ಈ ಬೆನ್ನಲ್ಲೇ ಟ್ವಿಟ್ಟರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಈ ಸಮಿತಿಯ ನೇತೃತ್ವ ವಹಿಸಿದ್ದ ಏಮ್ಸ್ ನಿರ್ದೇಶಕ ರಣ್ದೀಪ್ ಗುಲೇರಿಯಾ ಹೇಳಿಕೆ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿಕೆಗಳನ್ನು ಉಲ್ಲೇಖಿಸಿ #BJPExposedAgain ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.
Recommended Video
(ಒನ್‌ಇಂಡಿಯಾ ಸುದ್ದಿ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications