22,842 ಕೋಟಿ ವಂಚನೆ: ಎಬಿಜಿ ಶಿಪ್‌ಯಾರ್ಡ್ ಅಧ್ಯಕ್ಷನನ್ನು ಬಂಧಿಸಿದ ಸಿಬಿಐ

ನವದೆಹಲಿ, ಸೆಪ್ಟೆಂಬರ್ 21: ದೇಶದ 28 ಬ್ಯಾಂಕ್‌ಗಳ ಒಕ್ಕೂಟಕ್ಕೆ 22,842 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಎಬಿಜಿ ಶಿಪ್‌ಯಾರ್ಡ್ ಅಧ್ಯಕ್ಷ ರಿಷಿ ಕಮಲೇಶ್ ಅಗರ್ವಾಲ್ ಅನ್ನು ಸಿಬಿಐ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) ಮತ್ತು ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆ ಅಡಿಯಲ್ಲಿ ಅಧಿಕಾರ ದುರುಪಯಯೋಗ, ಕ್ರಿಮಿನಲ್ ಪಿತೂರಿ, ವಂಚನೆ, ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ ಸೇರಿದಂತೆ ಹಲವು ಆರೋಪಗಳನ್ನು ಹೊರಿಸಲಾಗಿದ್ದು, ಈ ಕುರಿತು ತನಿಖೆ ನಡೆಸಲಾಗುತ್ತಿದೆ.

2012 ಮತ್ತು 2017 ರ ನಡುವೆ ಆರೋಪಿಗಳು ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ. ಹಣವನ್ನು ಬೇರೆ ಕಡೆಗೆ ತಿರುಗಿಸುವುದು ಅಥವಾ ದುರುಪಯೋಗ ಮಾಡಿಕೊಳ್ಳುವುದು ಮತ್ತು ನಂಬಿಕೆಯ ಉಲ್ಲಂಘನೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂಬುದನ್ನು ಅರ್ನ್ಸ್ಟ್ ಮತ್ತು ಯಂಗ್ ಅವರ ವಿಧಿವಿಜ್ಞಾನ ಲೆಕ್ಕಪರಿಶೋಧನೆಯು ತೋರಿಸಿದೆ ಎಂದು ಸಿಬಿಐ ತಿಳಿಸಿದೆ. ಈ ಎಬಿಜಿ ಶಿಪ್‌ಯಾರ್ಡ್ ಹಣ ವಂಚನೆ ಪ್ರಕರಣದ ಹಿನ್ನೆಲೆ ಏನು? ಎಂಬುದನ್ನು ವರದಿಯಲ್ಲಿ ತಿಳಿದುಕೊಳ್ಳಿರಿ.

ಸಾಲ ಪಡೆಯುವುದಕ್ಕಾಗಿ ನಕಲಿ ಕಂಪನಿ

ಸಾಲ ಪಡೆಯುವುದಕ್ಕಾಗಿ ನಕಲಿ ಕಂಪನಿ

ಭಾರತದಲ್ಲಿ 100ಕ್ಕೂ ಹೆಚ್ಚು ಶೆಲ್(ನಕಲಿ) ಕಂಪನಿಗಳ ಮೂಲಕ ಬ್ಯಾಂಕ್‌ಗಳಿಂದ ಅಪಾರ ಪ್ರಮಾಣದ ಸಾಲವನ್ನು ಪಡೆದುಕೊಳ್ಳಲಾಗಿತ್ತು. ಹೀಗೆ ಪಡೆದುಕೊಂಡ ಸಾಲವನ್ನು ವಿದೇಶಗಳಲ್ಲಿರುವ ಮತ್ತು ದೇಶದಲ್ಲಿರುವ ಇತರೆ ಸಹೋದರ ಸಂಸ್ಥೆಗಳಿಗೆ ವರ್ಗಾವಣೆ ಮಾಡಲಾಗಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಎಬಿಜಿಯ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಿಷಿ ಕಮಲೇಶ್ ಅಗರವಾಲ್ ಮತ್ತು ಕಂಪನಿಯ ಇತರ ನಿರ್ದೇಶಕರ ಹೆಸರನ್ನೂ ಸೇರಿಸಲಾಗಿದೆ.

ಎಬಿಜಿ ಶಿಪ್ ಯಾರ್ಡ್ ಲಿಮಿಟೆಡ್ ಸಂಸ್ಥೆಗೆ ಸಾಲ

ಎಬಿಜಿ ಶಿಪ್ ಯಾರ್ಡ್ ಲಿಮಿಟೆಡ್ ಸಂಸ್ಥೆಗೆ ಸಾಲ

ಎಬಿಜಿ ಶಿಪ್ ಯಾರ್ಡ್ ಲಿಮಿಟೆಡ್ ಸಂಸ್ಥೆಯು ಭಾರತದಲ್ಲಿ ಹಲವು ಕಂಪನಿಗಳಿಂದ ಸಾಲವನ್ನು ಪಡೆದುಕೊಂಡಿದೆ. ಐಸಿಐಸಿಐ ಬ್ಯಾಂಕ್ ನೇತೃತ್ವದ 28 ಬ್ಯಾಂಕ್‌ಗಳ ಒಕ್ಕೂಟಕ್ಕೆ ಒಟ್ಟು 22,842 ಕೋಟಿ ರೂಪಾಯಿ ವಂಚನೆ ಮಾಡಿದೆ ಎಂದು ಸಿಬಿಐ ಆರೋಪಿಸಿದೆ. ಐಸಿಐಸಿಐ ಅತಿ ಹೆಚ್ಚು ಸಾಲ ನೀಡಿದ್ದು, ಅದರಿಂದ 7,089 ಕೋಟಿ ರೂಪಾಯಿ ಸಾಲವನ್ನು ನೀಡಲಾಗಿತ್ತು. ಐಡಿಬಿಐ ಬ್ಯಾಂಕ್ 3,639 ಕೋಟಿ ರೂಪಾಯಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2,925 ಕೋಟಿ ರೂಪಾಯಿ, ಬ್ಯಾಂಕ್ ಆಫ್ ಬರೋಡಾ 1,614 ಕೋಟಿ ರೂಪಾಯಿ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ 1,244 ಕೋಟಿ ರೂಪಾಯಿ ಸಾಲವನ್ನು ಪಡೆದುಕೊಂಡಿತ್ತು ಎಂದು ತಿಳಿದು ಬಂದಿದೆ.

ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ

ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ

ಕಳೆದ ಫೆಬ್ರವರಿಯಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಪ್ರಾಥಮಿಕ ಮಾಹಿತಿ ವರದಿ (ಎಫ್‌ಐಆರ್) ಆಧರಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಫೆಬ್ರವರಿ ತಿಂಗಳಿನಲ್ಲೇ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಏನಿದು ಎಬಿಜಿ ಶಿಪ್‌ಯಾರ್ಡ್?

ಏನಿದು ಎಬಿಜಿ ಶಿಪ್‌ಯಾರ್ಡ್?

ಎಬಿಜಿ ಶಿಪ್‌ಯಾರ್ಡ್ ಎಬಿಜಿ ಗ್ರೂಪ್‌ನ ಪ್ರಮುಖ ಕಂಪನಿಯಾಗಿದ್ದು, ಇದು ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿಯಲ್ಲಿ ತೊಡಗಿಸಿಕೊಂಡಿದೆ. ಗುಜರಾತಿನ ದಹೇಜ್ ಮತ್ತು ಸೂರತ್‌ನಲ್ಲಿ ಈ ಕಂಪನಿ ಹಡಗು ಕಟ್ಟೆಗಳಿವೆ. "ಕಳೆದ ಏಪ್ರಿಲ್ 2019 ರಿಂದ ಮಾರ್ಚ್ 2020ರ ನಡುವೆ ಎಬಿಜಿ ಶಿಪ್‌ಯಾರ್ಡ್‌ನ ಖಾತೆಗಳಿಂದ ವಂಚನೆ ಎಂದು ಒಕ್ಕೂಟದ ವಿವಿಧ ಬ್ಯಾಂಕ್‌ಗಳು ಘೋಷಿಸಿವೆ. ಎಬಿಜಿ ಶಿಪ್‌ಯಾರ್ಡ್‌ನಿಂದ ಅದರ ಸಂಬಂಧಿತ ಖಾತೆಗಳಿಗೆ ಭಾರಿ ಪ್ರಮಾಣದ ಹಣ ವರ್ಗಾವಣೆಯಾಗಿದ್ದು ಖಾತೆಯಲ್ಲಿ ನಮೂದಾಗಿದೆ," ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿತ್ತು.

22,842 ಕೋಟಿ ವಂಚನೆ: ಎಬಿಜಿ ಶಿಪ್‌ಯಾರ್ಡ್ ವಿರುದ್ಧ ಮನಿ ಲಾಂಡರಿಂಗ್ ಕೇಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+