• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಚುನಾವಣೆ: ಕೇಜ್ರಿವಾಲ್ ಗೆ ಶುಭ ಸುದ್ದಿ ಕೊಟ್ಟ ಸಮೀಕ್ಷೆ

|

ನವದೆಹಲಿ, ಜನವರಿ 27: ದೆಹಲಿ ಚುನಾವಣೆಯಲ್ಲಿ ಪ್ರಚಾರದ ಭರಾಟೆ ಜೋರಾಗಿ ನಡೆದಿದೆ. ಈ ನಡುವೆ ದೆಹಲಿಯ ಜನತೆ ಈ ಬಾರಿಗೆ ಯಾವ ಪಕ್ಷದ ಪರ ಒಲವು ಹೊಂದಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗಿದೆ.

ಎಬಿಪಿ ನ್ಯೂಸ್ ಹಾಗೂ ಸಿವೋಟರ್ಸ್ ನಡೆಸಿದ ದೇಶ್ ಕಾ ಮೂಡ್ ಸಮೀಕ್ಷೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆದ್ದಿದ್ದಾರೆ. ದೆಹಲಿಯಲ್ಲಿನ ಆಮ್ ಆದ್ಮಿ ಪಕ್ಷದ ಸರ್ಕಾರದ ಬಗ್ಗೆ ಶೇ 52 ಮಂದಿ ಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರು ಮತ್ತೊಮ್ಮೆ ಸಿಎಂ ಆಗಿ ಆಯ್ಕೆ ಮಾಡಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.

ಗ್ಯಾಲರಿ: ದಿಲ್ಲಿ ಗಲ್ಲಿಗಲ್ಲಿಗಳಲ್ಲಿ ಚುನಾವಣೆ ರಂಗೋ ರಂಗು

ಅರವಿಂದ್ ಕೇಜ್ರಿವಾಲ್ ಪರ ಶೇ 59ರಷ್ಟು ಮಂದಿ ಮತ ಹಾಕಿದ್ದಾರೆ. ದೇಶದ ಇತರೆ ರಾಜ್ಯಗಳ ಸಿಎಂಗಳ ಪೈಕಿ ಒಡಿಶಾದ ಬಿಜೆಡಿ ಸರ್ಕಾರದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ಅಧಿಕ ಶೇ 66.2ರಷ್ಟು ಮತ ಸಿಕ್ಕಿದೆ.

ಭಾರತದ ಪ್ರಧಾನಿ ಸ್ಥಾನಕ್ಕೆ ಮೋದಿಯೇ ಸೂಕ್ತ: ಸಮೀಕ್ಷೆ

ದೆಹಲಿಯಲ್ಲಿ ಜನವರಿ 14ರಿಂದ ಚುನಾವಣಾ ಆಯೋಗ ಅಧಿಸೂಚನೆ ಜಾರಿಯಾಗಿದ್ದು, ಫೆಬ್ರವರಿ 08ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.

ಮತ್ತೊಮ್ಮೆ ಸಿಎಂ ಆಗಿ ಆಯ್ಕೆ ಮಾಡಬಹುದು

ಮತ್ತೊಮ್ಮೆ ಸಿಎಂ ಆಗಿ ಆಯ್ಕೆ ಮಾಡಬಹುದು

ಎಬಿಪಿ ನ್ಯೂಸ್ ಹಾಗೂ ಸಿವೋಟರ್ಸ್ ನಡೆಸಿದ ದೇಶ್ ಕಾ ಮೂಡ್ ಸಮೀಕ್ಷೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆದ್ದಿದ್ದಾರೆ. ದೆಹಲಿಯಲ್ಲಿನ ಆಮ್ ಆದ್ಮಿ ಪಕ್ಷದ ಸರ್ಕಾರದ ಬಗ್ಗೆ ಶೇ 52 ಮಂದಿ ಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರು ಮತ್ತೊಮ್ಮೆ ಸಿಎಂ ಆಗಿ ಆಯ್ಕೆ ಮಾಡಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಪರ ಶೇ 59ರಷ್ಟು ಮಂದಿ ಮತ ಹಾಕಿದ್ದಾರೆ. ದೇಶದ ಇತರೆ ರಾಜ್ಯಗಳ ಸಿಎಂಗಳ ಪೈಕಿ ಒಡಿಶಾದ ಬಿಜೆಡಿ ಸರ್ಕಾರದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗೆ ಅಧಿಕ ಶೇ 66.2ರಷ್ಟು ಮತ ಸಿಕ್ಕಿದೆ.

ಐಎಎನ್ಎಸ್ ಹಾಗೂ ಸಿ-ವೋಟರ್ ಸಮೀಕ್ಷೆ

ಐಎಎನ್ಎಸ್ ಹಾಗೂ ಸಿ-ವೋಟರ್ ಸಮೀಕ್ಷೆ

ದೆಹಲಿ ವಿಧಾನಸಭಾ ಚುನಾವಣೆ ಮುಹೂರ್ತ ಹೊರ ಬೀಳುತ್ತಿದ್ದಂತೆ ಐಎಎನ್ಎಸ್ ಹಾಗೂ ಸಿ-ವೋಟರ್ ಸಂಸ್ಥೆಗಳು ಸಮೀಕ್ಷೆ ನಡೆಸಿವೆ. ಖಾಸಗಿ ಸಂಸ್ಥೆಗಳು ನಡೆಸಿರುವ ಮತದಾನಪೂರ್ವ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷದ ಪರ ಮತದಾರರು ಹೆಚ್ಚು ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.

ಇಂದೇ ಚುನಾವಣೆ ನಡೆದರೆ ಆಮ್ ಆದ್ಮಿ ಪಕ್ಷವು 70 ವಿಧಾನಸಭಾ ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ. ಇನ್ನು, ಭಾರತೀಯ ಜನತಾ ಪಕ್ಷವು 8 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಎರಡನೇ ಸ್ಥಾನದಲ್ಲಿ ಇರಲಿದ್ದು, ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮೂರನೇ ಸ್ಥಾನಕ್ಕೆ ಕುಸಿಯಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆ

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆ

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ. ಈ ಬಾರಿ ಬಿಜೆಪಿ ಮಿತ್ರ ಪಕ್ಷ ಜೆಜೆಪಿ ಪಕ್ಷ ಕೂಡಾ ಕಣಕ್ಕಿಳಿಯಲಿದೆ. ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.

ಎಎಪಿ ವಿರುದ್ಧ ಬಿಜೆಪಿ ನೇರ ಹಣಾಹಣಿ

ಎಎಪಿ ವಿರುದ್ಧ ಬಿಜೆಪಿ ನೇರ ಹಣಾಹಣಿ

ನವದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳಲ್ಲಿ ಒಟ್ಟು 668 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಫೆಬ್ರವರಿ.08ರಂದು ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, ಫೆಬ್ರವರಿ.11ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಫೆಬ್ರವರಿ.22ರಂದು ಪ್ರಸಕ್ತ ಸರ್ಕಾರದ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ಕಳೆದ 2015ರಲ್ಲಿ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಜಯಭೇರಿ ಬಾರಿಸಿತ್ತು. 70 ವಿಧಾನಸಭಾ ಕ್ಷೇತ್ರಗಳ ಪೈಕಿ 67 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಭಾರತೀಯ ಜನತಾ ಪಕ್ಷವು ಕೇವಲ ಮೂರು ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಪಕ್ಷವು ಶೂನ್ಯಸಾಧನೆ ಮಾಡಿತ್ತು.

English summary
ABP News-CVoter 'Desh Ka Mood' survey found out that a 52% respondents were highly satisfied with the functioning of the Aam Aadmi Party government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more