ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

|
Google Oneindia Kannada News

ನವದೆಹಲಿ, ಜನವರಿ 09: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಲ್ಲಿ ಕೋವಿಡ್‌ ಸ್ಥಿತಿಗತಿಯ ಅವಲೋಕನಕ್ಕಾಗಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಿಷನ್ ಮೋಡ್‌ನಲ್ಲಿ ಹದಿಹರೆಯದವರಿಗೆ ಲಸಿಕೆ ಚಾಲನೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಪ್ರಧಾನಿ ಮೋದಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭಾರತದಲ್ಲಿ 150 ಕೋಟಿ ಡೋಸ್ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಅಭಿನಂದನೆ ಭಾರತದಲ್ಲಿ 150 ಕೋಟಿ ಡೋಸ್ ಲಸಿಕೆ ವಿತರಣೆಗೆ ಪ್ರಧಾನಿ ಮೋದಿ ಅಭಿನಂದನೆ

15-18ರ ವಯಸ್ಸಿನವರ ಲಸಿಕೀಕರಣದ ವೇಗವನ್ನು ಹೆಚ್ಚಿಸುವಂತೆ ಸಭೆಯಲ್ಲಿ ಹೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಮತ್ತು ಕಣ್ಗಾವಲು ವ್ಯವಸ್ಥೆ ಮುಂದುವರಿಸಬೇಕು ಎಂದು ಹೇಳಿದರು.

Accelerate Covid Vaccine Drive for Adolescents in Mission Mode Says PM Modi to Officials

ಇನ್ನು ಕೋವಿಡ್‌ ಪ್ರಕರಣಗಳು ಅಧಿಕವಾಗಿ ದಾಖಲಾಗುವ ರಾಜ್ಯಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸುವುದಾಗಿ ಪ್ರಧಾನಮಂತ್ರಿ ಭರವಸೆ ನೀಡಿದ್ದಾರೆ. ಹಾಗೆಯೇ ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ರಾಜ್ಯದ ಕೋವಿಡ್‌ ಪರಿಸ್ಥಿತಿ, ಕೋವಿಡ್‌ ನಿಯಂತ್ರಣ ಕ್ರಮ ಹಾಗೂ ಸಾರ್ವಜನಿಕ ಕ್ರಮಗಳನ್ನು ಚರ್ಚೆ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆಯಲಾಗುವುದು ಎಂದು ಕೂಡಾ ಪ್ರಧಾನ ಮೋದಿ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿರುದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ.

ಪರಿಶೀಲನಾ ಸಭೆಯಲ್ಲಿ, ಪ್ರಧಾನಿ ಮೋದಿ ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ, ಲಸಿಕೆ ಹಾಕುವ ಕಾರ್ಯವು ಭರದಿಂದ ಸಾಗುತ್ತಿದೆ. ನಿನ್ನೆಯವರೆಗೆ 15-18 ವರ್ಷ ವಯಸ್ಸಿನವರಿಗೆ 20 ದಶಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗುತ್ತದೆ. ದೇಶದಲ್ಲಿ ಕೋವಿಡ್-19 ಲಸಿಕೆಗಳ ಸಂಖ್ಯೆ 151.58 ಕೋಟಿ ತಲುಪಿದೆ.

ದೇಶದಲ್ಲಿ ಕೋವಿಡ್‌

ಭಾನುವಾರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,59,632 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ ಮತ್ತು 327 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಕಳೆದ 24 ಗಂಟೆಗಳಲ್ಲಿ 40,863 ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ಭಾರತದಲ್ಲಿ ಕೊರೊನಾದ ಒಟ್ಟು ಸಕ್ರಿಯ ಪ್ರಕರಣಗಳು 5,90,611ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಾವಿನ ಸಂಖ್ಯೆ 4,83,790ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಇದುವರೆಗೆ 151.58 ಕೋಟಿ ಜನರು ಕೊರೋನಾ ವಿರುದ್ಧ ಲಸಿಕೆ ಹಾಕಿಸಿಕೊಂಡಿದ್ದಾರೆ. ದೇಶದ ಪಾಸಿಟಿವಿಟಿ ರೇಟ್ 10.21% ರಷ್ಟಿದೆ. ಈವರೆಗೆ ಒಟ್ಟು 3,44,53,603 ಜನ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ 3,623 ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. 1,409 ಜನರು ಆಸ್ಪತ್ರೆಯಿಂದ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. (ಒನ್‌ಇಂಡಿಯಾ ಸುದ್ದಿ)

Recommended Video

ಉತ್ತಮ ನಾಯಕನಾಗಲು Virat ಬಳಿ ಸಲಹೆ ಕೇಳ್ತಾರಾ Rahul? | Oneindia Kannada

English summary
Accelerate Covid Vaccine Drive for Adolescents in Mission Mode Says PM Modi to Officials.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X