ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊವಿಡ್-19 ಪರೀಕ್ಷೆಗೆ ಕೇವಲ 400 ರೂಪಾಯಿ!

|
Google Oneindia Kannada News

ನವದೆಹಲಿ, ನವೆಂಬರ್.24: ಭಾರತದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆಗೆ ಏಕರೂಪದ ದರ ನಿಗದಿಗೊಳಿಸುವುದು ಸೂಕ್ತವೇ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್ ಸೂಚಿಸಿದೆ.

ದೇಶಾದ್ಯಂತ ಎಲ್ಲ ವರ್ಗದ ಜನರಿಗೂ ಕೊವಿಡ್-19 ಸೋಂಕು ತಪಾಸಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ದೇಶದ ಯಾವುದೇ ಪ್ರದೇಶದಲ್ಲಿ RT-PCR ತಪಾಸಣೆಗೆ ಒಳಗಾದರೂ 400 ರೂಪಾಯಿ ದರ ನಿಗದಿಗೊಳಿಸುವಂತೆ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿತ್ತು.

"ಕೇಂದ್ರದ ಆಸ್ಪತ್ರೆಗಳಲ್ಲಿ ಕೊವಿಡ್-19 ರೋಗಿಗಳಿಗೆ ಹಾಸಿಗೆ ಮೀಸಲಿರಿಸಿ"

ಕೊವಿಡ್-19 ಸೋಂಕು ತಪಾಸಣೆಗೆ ಏಕರೂಪ ದರ ನಿಗದಿಗೊಳಿಸುವಂತೆ ವಕೀಲರು ಸಲ್ಲಿಸಿದ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ದೇಶಾದ್ಯಂತ ಒಂದೇ ದರ ನಿಗದಿಗೊಳಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿತು.

Across The Country Coronavirus Testing Price At Rs.400: Supreme Court Seeks Central Govt Response


ಭಾರತದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ಭಾರತದಲ್ಲಿ ಒಂದೇ ದಿನ 37975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 42314 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 480 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 91,77,841ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,34,218 ಮಂದಿ ಪ್ರಾಣ ಬಿಟ್ಟಿದ್ದಾರೆ. 86,04,955 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 4,38,667 ಸಕ್ರಿಯ ಪ್ರಕರಣಗಳಿವೆ.

English summary
Across The Country Coronavirus Testing Price At Rs.400: Supreme Court Asked Central Govt Response.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X