ದೆಹಲಿಯಲ್ಲಿ 10 ಸಾವಿರಕ್ಕಿಂತ ಕಡಿಮೆ ಕೋವಿಡ್ ಸಕ್ರಿಯ ಕೇಸ್!

ನವದೆಹಲಿ, ಆಗಸ್ಟ್ 04 : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,39,156.

Recommended Video

      ರಾಮಮಂದಿರ ಶಿಲಾ ನ್ಯಾಸಕ್ಕೆ ಕ್ಷಣಗಣನೇ | Oneindia Kannada

      ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಕುರಿತು ಮಂಗಳವಾರ ಟ್ವೀಟ್ ಮಾಡಿದ್ದಾರೆ. ಇಂದು ಸಂಜೆಯ ವೇಳೆಗೆ ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9897. ಇಂದು ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 12.

      "ದೆಹಲಿ ಮಾದರಿ ಬಗ್ಗೆ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ. ದೆಹಲಿಯವ ಎಂದು ಹೇಳಿಕೊಳ್ಳಲು ಹೆಮ್ಮೆ ಆಗುತ್ತಿದೆ" ಎಂದು ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

      Active COVID 19 Cases In Delhi Is 9897

      ಕಳೆದ 24 ಗಂಟೆಯಲ್ಲಿ ದೆಹಲಿಯಲ್ಲಿ 674 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 972 ಜನರು ಗುಣಮುಖರಾಗಿದ್ದಾರೆ. 12 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9897.

      ಕೋವಿಡ್ ಸೋಂಕಿನಿಂದ ರಾಜ್ಯದಲ್ಲಿ ಇದುವರೆಗೂ 1,25,226 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 4033.

      ಪ್ರಸ್ತುತ ದೇಶದಲ್ಲಿ ಕೊರೊನಾ ಸೋಂಕಿತರು ಹೆಚ್ಚಿರುವ ರಾಜ್ಯಗಳ ಪಟ್ಟಿಯಲ್ಲಿ ದೆಹಲಿ 5ನೇ ಸ್ಥಾನಕ್ಕೆ ಇಳಿದಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರಗಳು ಹೆಚ್ಚು ಸೋಂಕಿತರು ಇರುವ ರಾಜ್ಯಗಳಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+