ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ನಿಧನ
ನವದೆಹಲಿ, ಸೆಪ್ಟೆಂಬರ್ 11: ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತ, ಆರ್ಯ ಸಮಾಜದ ನಾಯಕ ಸ್ವಾಮಿ ಅಗ್ನಿವೇಶ್ (80) ಶುಕ್ರವಾರ ನಿಧನರಾದರು. ಯಕೃತ್ತಿನ ಸಿರೋಸಿಸ್ನಿಂದ ಬಳಲುತ್ತಿದ್ದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿ ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಲಿವರ್ ಆಂಡ್ ಬಿಲಿಯರಿ ಸೈನ್ಸಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರದಿಂದಲೂ ಅವರು ಬಹುಅಂಗಾಂಗ ವೈಫಲ್ಯದ ಕಾರಣ ವೆಂಟಿಲೇಟರ್ ಸಪೋರ್ಟ್ನಲ್ಲಿದ್ದರು.
ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಸೆ. 11ರಂದು ತೀವ್ರ ಹದಗೆಟ್ಟಿತ್ತು. ಸಂಜೆ 6 ಗಂಟೆಯ ವೇಳೆಗೆ ಹೃದಯಾಘಾತಕ್ಕೆ ಒಳಗಾದರು. ಅವರ ಹೃದಯ ಬಡಿತವನ್ನು ಮರುಸ್ಥಾಪಿಸುವ ಪ್ರಯತ್ನಗಳು ನಡೆದರೂ ಸಂಜೆ 6.30ರ ವೇಳೆಗೆ ಅವರು ಕೊನೆಯುಸಿರೆಳೆದರು. ತಮ್ಮ ನೆಚ್ಚಿನ ನಾಯಕ ನಿಧನದಿಂದ ಶೋಕಿಸುತ್ತಿರುವ ದೇಶದ ಜನತೆಯ ಜತೆಗೆ ಐಎಲ್ಬಿಎಸ್ ಕೂಡ ಸೇರಿಕೊಂಡಿದೆ ಎಂದು ಆಸ್ಪತ್ರೆ ಹೇಳಿಕೆ ತಿಳಿಸಿದೆ.
ಹರಿಯಾಣದ ಮಾಜಿ ಶಾಸಕರಾಗಿದ್ದ ಅಗ್ನಿವೇಶ್, 1970ರಲ್ಲಿ ಆರ್ಯ ಸಮಾಜದ ತತ್ವಗಳ ಆಧಾರದಲ್ಲಿ ಆರ್ಯ ಸಭಾ ಎಂಬ ರಾಜಕೀಯ ಪಕ್ಷವನ್ನು ಹುಟ್ಟುಹಾಕಿದ್ದರು. ಧರ್ಮಗಳ ನಡುವಿನ ಮಾತುಕತೆ ವ್ಯವಹಾರಗಳಲ್ಲಿ ಅವರು ಮಧ್ಯಸ್ಥಿಕೆ ವಹಿಸುತ್ತಿದ್ದರು.

ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಹಾಗೂ ಮಹಿಳಾ ವಿಮೋಚನೆಯ ಪರವಾದ ಆಂದೋಲನಗಳು ಸೇರಿದಂತೆ ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಅವರು ತೊಡಗಿಸಿಕೊಂಡಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications