ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಬರೋಬ್ಬರಿ 9 ತಿಂಗಳ ನಂತರ ನೂರರ ಕೆಳಗಿಳಿದ ಕೊರೊನಾ ಪ್ರಕರಣ

|
Google Oneindia Kannada News

ನವದೆಹಲಿ, ಜನವರಿ 27: ಸತತ ಒಂಬತ್ತು ತಿಂಗಳ ನಂತರ ರಾಜಧಾನಿ ದೆಹಲಿಯಲ್ಲಿ ಬುಧವಾರ ಅತಿ ಕಡಿಮೆ ಕೊರೊನಾ ಸೋಂಕಿನ ಪ್ರಕರಣ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 96 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, ಒಂಬತ್ತು ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

"ಈ ಎರಡು ಅಂಶದತ್ತ ಗಮನ ಕೊಡಿ, ಲಸಿಕೆ ಪರಿಣಾಮ ನೋಡಿ...

ದೆಹಲಿಯಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 212 ಮಂದಿ ಗುಣಮುಖರಾಗಿರುವುದಾಗಿ ತಿಳಿದುಬಂದಿದೆ. ಕಳೆದ ಏಪ್ರಿಲ್ ನಿಂದಲೂ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಇಷ್ಟು ಕಡಿಮೆ ದೈನಂದಿನ ಕೊರೊನಾ ಪ್ರಕರಣ ದಾಖಲಾಗಿದೆ. ಕಳೆದ ಏಪ್ರಿಲ್ 30ರಂದು ದೆಹಲಿಯಲ್ಲಿ 76 ಹೊಸ ಪ್ರಕರಣಗಳು ಪತ್ತೆಯಾಗಿದ್ದವು.

After 9 Months Delhi Recorded Less Daily Covid Cases

ಆನಂತರ ದಿನನಿತ್ಯದ ಕೊರೊನಾ ಪ್ರಕರಣಗಳು ಏರಿಕೆ ಹಾದಿಯಲ್ಲಿಯೇ ಸಾಗಿದ್ದವು. ಇದೀಗ ಮತ್ತೆ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿರುವುದು ನೆಮ್ಮದಿಯ ನಿಟ್ಟುಸಿರುಬಿಡುವಂತೆ ಮಾಡಿದೆ. ದೆಹಲಿಯಲ್ಲಿ ಇದುವರೆಗೂ ಒಟ್ಟಾರೆ 6,34,325 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 6.2 ಲಕ್ಷ ಮಂದಿ ಈಗಾಗಲೇ ಗುಣಮುಖರಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಚೇತರಿಕೆ ಪ್ರಮಾಣವೂ 98% ತಲುಪಿದೆ.

English summary
For the first time after 9 months, delhi recorded less daily covid cases under 100,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X