ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

11 ಗಂಟೆಗಳ ನಂತರ ಪ್ರತಿಭಟನೆ ವಾಪಸ್ ಪಡೆದ ಪೊಲೀಸರು

|
Google Oneindia Kannada News

ನವದೆಹಲಿ, ನವೆಂಬರ್ 05: ವಕೀಲರಿಂದ ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಪೊಲೀಸರು 11 ಗಂಟೆಗಳ ನಂತರ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.

ದೆಹಲಿಯ ಪೊಲೀಸ್ ಹೆಡ್ ಕ್ವಾಟ್ರಸ್ ನಲ್ಲಿ ಮಂಗಳವಾರ ಬೆಳಿಗ್ಗೆಯಿಂದ ಪೊಲೀಸರು ಪ್ರತಿಭಟನೆ ನಡೆಸುತ್ತಿದ್ದರು. ಸೋಮವಾರ ಮತ್ತು ಶನಿವಾರದಂದು ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರು ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ನಡೆಯನ್ನು ಖಂಡಿಸಿರುವ ಪೊಲೀಸರು, ವಕೀಲರ ವಿರುದ್ಧ ಕಠುಣ ಕ್ರಮ ಕೈಗೊಳ್ಳಬೇಕು, ಮತ್ತು ಕರ್ತವ್ಯನಿರತ ಪೊಲೀಸರಿಗೆ ರಕ್ಷಣೆ ಸಿಗಬೇಕು ಎಂದು ಕೋರಿ ಪ್ರತಿಭಟನೆ ನಡೆಸಿದ್ದರು.

ವಕೀಲರಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆವಕೀಲರಿಂದ ಪೊಲೀಸ್ ಪೇದೆ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

After Assurances Delhi Police Personnel end Protest

ಪೊಲೀಸರಿಗೆ ಥಳಿಸುತ್ತಿರುವ ಶಾಕಿಂಗ್ ವಿಡಿಯೋ ನೋಡಿ ಅಣ್ಣಾಮಲೈ ಕಿಡಿಪೊಲೀಸರಿಗೆ ಥಳಿಸುತ್ತಿರುವ ಶಾಕಿಂಗ್ ವಿಡಿಯೋ ನೋಡಿ ಅಣ್ಣಾಮಲೈ ಕಿಡಿ

ನಂತರ ಪೊಲೀಸರ ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ನೀಡಿದ ಮೇಲೆ ಪ್ರತಿಭಟನಕಾರರು ಪ್ರತಿಭಟನೆಯನ್ನು ಹಿಂಪಡೆದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ನಾಯಕ್, "ಪೊಲೀಸ್ ಮೇಲೆ ನಡೆದ ಹಲ್ಲೆಯ ಪ್ರಕರಣಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಲಾಗಿದೆ. ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಅಷ್ಟೇ ಅಲ್ಲ, ದೆಹಲಿ ಹೈಕೋರ್ಟ್ ಸಹ ಈ ಗ್ಗೆ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ" ಎಂದಿದ್ದಾರೆ.

English summary
After Assurances Delhi Police Personnel end Protest
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X