ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದಲ್ಲಿ ಧರ್ಮೇಂದ್ರ ಪ್ರಧಾನ್ ಪಾಲಿಗೆ ಒಲಿದ ಶಿಕ್ಷಣ ಖಾತೆ

|
Google Oneindia Kannada News

ನವದೆಹಲಿ, ಜುಲೈ 07: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದಿಂದ ಹೊರಗುಳಿದಿದ್ದ ಮಾಜಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪಾಲಿಗೆ ಮತ್ತೊಮ್ಮೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ.

ಈ ಹಿಂದೆ ಕೇಂದ್ರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ನಿರ್ವಹಿಸಿದ ಧರ್ಮೇಂದ್ರ ಪ್ರಧಾನ್ ರಿಗೆ ಈ ಬಾರಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಶಿಕ್ಷಣ ಸಚಿವಾಲಯದ ಜೊತೆಗೆ ಕೌಶಲ್ಯ ಅಭಿವೃದ್ಧಿ ಸಚಿವಾಲಯವನ್ನು ಸೇರಿಸಲಾಗಿದೆ. ಭವಿಷ್ಯದಲ್ಲಿ ಈ ಎರಡು ಸಚಿವಾಲಯಗಳು ಒಟ್ಟಾಗಿ ಕಾರ್ಯ ನಿರ್ವಹಿಸಲಿದ್ದು, ಎರಡೂ ಸಚಿವಾಲಯದ ಹೊಣೆಯನ್ನು ಧರ್ಮೇಂದ್ರ ಪ್ರಧಾನ್ ರಿಗೆ ವಹಿಸಲಾಗಿದೆ.

ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ?ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ?

ನವದೆಹಲಿ ರಾಷ್ಟ್ರಪತಿ ಭವನದಲ್ಲಿ ಆಷಾಢ 16, 1943ನೇ ಶಖೆ ಬುಧವಾರ 6 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ 43 ನೂತನ ಸಚಿವರು ಸೇರ್ಪಡೆಯಾದರು. ಬುಧವಾರ ಕೇಂದ್ರ ಸಂಪುಟ ಸೇರಿದ 43 ಸಚಿವರ ಪೈಕಿ 15 ನೂತನ ಸಚಿವರಿಗೆ ಸಂಪುಟ ದರ್ಜೆ ಸ್ಥಾನಮಾನ ಹಾಗೂ ಬಾಕಿ 28 ಸಚಿವರಿಗೆ ರಾಜ್ಯ ಖಾತೆಯ ಸ್ಥಾನಮಾನ ನೀಡಲಾಗಿದೆ.

After Cabinet Reshuffle Dharmendra Pradhan Will Take Charge As Education Minister

ಪ್ರಧಾನಮಂತ್ರಿ ಮೋದಿ ಅಭಿನಂದನೆ:

ಕೇಂದ್ರ ಸರ್ಕಾರದ ಸಂಪುಟ ಸಚಿವರಾಗಿ ಹಾಗೂ ರಾಜ್ಯ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ತಮ್ಮ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. "ಇಂದು ಪ್ರಮಾಣವಚನ ಸ್ವೀಕರಿಸಿದ ಎಲ್ಲ ಸಹೋದ್ಯೋಗಿಗಳನ್ನು ನಾನು ಅಭಿನಂದಿಸುತ್ತೇನೆ ಮತ್ತು ಅವರ ಮಂತ್ರಿ ಅಧಿಕಾರಾವಧಿಗೆ ಶುಭ ಹಾರೈಸುತ್ತೇನೆ. ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಬಲವಾದ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ನಮ್ಮ ಕಾರ್ಯವನ್ನು ಮುಂದುವರಿಸಬೇಕಿದೆ," ಎಂದು ಟ್ವೀಟ್ ಮಾಡಿದ್ದಾರೆ.

English summary
After Cabinet Reshuffle Dharmendra Pradhan Will Take Charge As Education Minister. Education And Skill Development Ministries Worked Jointly In Future.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X