ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಂಡು ಮಕ್ಕಳ ಮೇಲೆ ನಡೆವ ಲೈಂಗಿಕ ದೌರ್ಜನ್ಯಕ್ಕೂ ಕಠಿಣ ಕಾನೂನು?

|
Google Oneindia Kannada News

ನವದೆಹಲಿ, ಏಪ್ರಿಲ್ 28: ಪೋಕ್ಸೊ ಕಾಯ್ದೆಯಲ್ಲಿ ತಿದ್ದುಪಡಿ ತಂದನಂತರ ಮತ್ತೊಂದು ಮಹತ್ವದ ನಿರ್ಣಯ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಏಪ್ರಿಲ್ 21 ರಂದು ಪೋಕ್ಸೊ (Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತಂದಿದ್ದ ಕೇಂದ್ರ ಸರ್ಕಾರ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಕ್ಕೆ ಮರಣದಂಡನೆ ವಿಧಿಸುವ ವಿಶೇಷ ನಿರ್ಧಾರ ಪ್ರಕಟಿಸಿತ್ತು.

12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ 12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ

ಆದರೆ ಪೋಕ್ಸೊ ಕಾಯ್ದೆಯನ್ನು ಲಿಂಗಾತೀತಗೊಳಿಸಿ, ಗಂಡು ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಕ್ಕೂ ಇಂಥದೇ ಕಠಿಣ ಶಿಕ್ಷೆ ವಿಧಿಸುವಂತೆ ಸಾರ್ವನಿಕ ವಲಯದಲ್ಲಿ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾಯ್ದೆಯಲ್ಲಿ ಮತ್ತೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

After death for child rapists, Centre to make POCSO Act gender-neutral

ಇತ್ತೀಚಿನ ದಿನಗಳಲ್ಲಿ ಗಂಡು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಕುರಿತು ಸಾಕಷ್ಟು ವರದಿಗಳಾಗಿವೆ. 'ಭಾರತದಲ್ಲಿ ಗಂಡು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ಕಡೆಗಣಿಸಲಾಗುತ್ತಿದೆ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿ, ಈ ಕುರಿತೂ ಸರ್ಕಾರ ಕಠಿಣ ನಿರ್ಧಾರ ತಳೆಯುವಂತೆ ಕೂಗು ಕೇಳಿಬಂದಿತ್ತು. ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವಾಲಯ ಪೋಕ್ಸೊ ಕಾಯ್ದೆಯಲ್ಲಿ ಮತ್ತಷ್ಟು ತಿದ್ದುಪಡಿ ತರುವ ನಿರೀಕ್ಷೆಯಿದೆ.

ಭಾರತದಲ್ಲಿ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣುದ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುವ ಕುರಿತು ಚಿಂತಿಸಲಾಗಿತ್ತು. ಜಮ್ಮು ಕಾಶ್ಮೀರದ ಕತುವಾದಲ್ಲಿ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ದೇಶದಾದ್ಯಂತ ಆಕ್ರೋಶ ಕೇಳಿಬಂದ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಂಡಿತ್ತು.

English summary
The Central government is planning to amend the POCSO Act to provide justice to male child victims of sexual assault, the Women and Child Development Ministry said, days after an ordinance promulgated by President Ram Nath Kovind provided the death penalty for rape of girls under the age of 12
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X