ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದಿ ಹೇರಿಕೆ ಆರೋಪ: ಆಕ್ರೋಶಕ್ಕೆ ತಲೆಬಾಗಿದ ಕೇಂದ್ರ ಸರ್ಕಾರ

|
Google Oneindia Kannada News

ನವದೆಹಲಿ, ಜೂನ್ 03: ಹಿಂದಿ ಹೇರಿಕೆ ಆರೋಪ ಮತ್ತು ದಕ್ಷಿಣ ಭಾರತದ ರಾಜ್ಯಗಳ ಜನರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ತನ್ನ ಕರಡಿನಲ್ಲಿ ಬದಲಾವಣೆ ಮಾಡಲು ಮುಂದಾಗಿದೆ. ಹಿಂದಿ ಕಡ್ಡಾಯವಲ್ಲ ಎಂದು ಅದು ಹೇಳಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹೊಸ ಶಿಕ್ಷಣ ನೀತಿ ಕರಡು ರೂಪಿಸಿದ್ದು, 500 ಪುಟಗಳ ಈ ವರದಿಯಲ್ಲಿ ಹಿಂದಿ ಮಾತನಾಡದ ರಾಜ್ಯಗಳಲ್ಲಿ ಆಯಾ ರಾಜ್ಯದ ಪ್ರಾದೇಶಿಕ ಭಾಷೆಯ ಜೊತೆಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಕಲಿಸಲು ಸೂಚಿಸಲಾಗಿತ್ತು.

ಹಿಂದಿ ಹೇರಲು ಬಂದರೆ ಜೇನುಗೂಡಿಗೆ ಕಲ್ಲು ಎಸೆದ ಹಾಗೆ: ಬಿಜೆಪಿಗೆ ಡಿಎಂಕೆ ಸ್ಟಾಲಿನ್ ಡಿಚ್ಚಿಹಿಂದಿ ಹೇರಲು ಬಂದರೆ ಜೇನುಗೂಡಿಗೆ ಕಲ್ಲು ಎಸೆದ ಹಾಗೆ: ಬಿಜೆಪಿಗೆ ಡಿಎಂಕೆ ಸ್ಟಾಲಿನ್ ಡಿಚ್ಚಿ

ಶಾಲಾಪೂರ್ವ ಶಿಕ್ಷಣದಿಂದ ಹನ್ನೆರಡನೇ ತರಗತಿ ತನಕ ಹಿಂದಿ ಮಾತನಾಡದ ರಾಜ್ಯಗಳಲ್ಲಿ ಹಿಂದಿ ಕಲಿಸಲು ಈ ಕರಡಿನಲ್ಲಿ ಶಿಫಾರಸು ಮಾಡಲಾಗಿತ್ತು. ಅದನ್ನು ವಿರೋಧಿಸಿ ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯದಲ್ಲಿ ಪ್ರತಿಭಟನೆ ಆರಂಭವಾಗಿತ್ತು.

After education policy draft controversy, centre says ‘Hindi not compulsory’

ಹೊಸ ಶಿಕ್ಷಣ ನೀತಿ ಬಗ್ಗೆ ಮಾತನಾಡಿದ್ದ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, 'ತಮಿಳುನಾಡಿನ ಜನರ ರಕ್ತದಲ್ಲೇ ಹಿಂದಿ ಇಲ್ಲ. ಹಿಂದಿ ಹೇರಲು ಬಂದರೆ ಜೇನುಗೂಡಿಗೆ ಕಲ್ಲು ಎಸೆದ ಹಾಗಾಗುತ್ತದೆ' ಎಂದಿದ್ದರು.

ಹಿಂದಿ ಹೇರಿಕೆ ಸುಳ್ಳೇ ಸುಳ್ಳು: ತಮಿಳಿನಲ್ಲಿ ನಿರ್ಮಲಾ ಸೀತಾರಾಮನ್ ಟ್ವೀಟ್ಹಿಂದಿ ಹೇರಿಕೆ ಸುಳ್ಳೇ ಸುಳ್ಳು: ತಮಿಳಿನಲ್ಲಿ ನಿರ್ಮಲಾ ಸೀತಾರಾಮನ್ ಟ್ವೀಟ್

ಜೊತೆಗೀ ಕರ್ನಾಟಕದಲ್ಲೂ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಕೇಂದ್ರ ಸರ್ಕಾರ ಪ್ರಾದೇಶಿಕ ಭಾಷೆಗಳಿಗೆ ಗೌರವ ನೀಡಬೇಕು ಎಂಬ ಕೂಗು ಕೇಳಿಬಂದಿತ್ತು. ಈ ಎಲ್ಲಾ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ಇದೀಗ ತನ್ನ ವರಸೆಯನ್ನು ಬದಲಿಸಿದೆ.

English summary
Amid massive uproar in Tamil Nadu over the three language formula proposed in the draft National Education Policy, the Union Government has reportedly agreed to the demands of not making Hindi compulsory.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X