ಪ್ರಿಯಾಂಕಾ ರಾಜಕೀಯ ಪ್ರವೇಶದ ನಂತರ ಮೈತ್ರಿ ಮರೆತ ಕಾಂಗ್ರೆಸ್!
Recommended Video

ನವದೆಹಲಿ, ಜನವರಿ 25: ಗಾಂಧಿ ಕುಟುಂಬದ ಕುಡಿ ಪ್ರಿಯಾಂಕಾ ಗಾಂಧಿ ವಾಧ್ರಾ ರಾಜಕೀಯ ಪ್ರವೇಶದ ನಂತರ ಕಾಂಗ್ರೆಸ್ಸಿಗೆ ಹೊಸ ಶಕ್ತಿ ಬಂದಂತಾಗಿದೆ.
ಆದ್ದರಿಂದಲೇ ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಆಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷದೊಂಇಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ.

ಆಂಧ್ರದ ಒಟ್ಟು 25 ಕ್ಷೇತ್ರಗಳಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ಅಷ್ಟೇ ಅಲ್ಲ, ಲೋಕಸಭಾ ಚುನಾವಣೆಯ ಆಸುಪಾಸಿನಲ್ಲೇ ನಡೆಯಲಿರುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ 175 ಕ್ಷೇತ್ರಗಳಲ್ಲೂ ಏಕಾಂಗಿಯಾಗಿ ಸ್ಪರ್ಧಿಸಲಿದೆ.
ಕೇವಲ ಆಂಧ್ರದಲ್ಲಿ ಮಾತ್ರವಲ್ಲದೆ, ಪಶ್ಚಿಮ ಬಂಗಾಳದಲ್ಲೂ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧರಿಸಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಯಾವ ಸಾಧ್ಯತೆಯನ್ನೂ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಎರಡೂ ಪಕ್ಷಗಳೂ ತಳ್ಳಿಹಾಕಿವೆ. ಕಳೆದ ವಾರ ಕೋಲ್ಕತ್ತಾದಲ್ಲಿ ನಡೆದ ಮಹಾಘಟಬಂಧನ ಸಮಾವೇಶದಲ್ಲೂ ರಾಹುಲ್ ಗಾಂಧಿ ಭಾಗವಹಿಸದೆ, ಬೆಂಬಲ ನೀಡುವುದಾಗಿ ಹೇಳಿ ದೂರವೇ ಉಳಿದಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications