ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ನಿರ್ವಹಣಾ ಮಂಡಳಿಗಾಗಿ ಎಐಎಡಿಎಂಕೆ ಸಂಸದರ ಪ್ರತಿಭಟನೆ

|
Google Oneindia Kannada News

ನವದೆಹಲಿ, ಮಾರ್ಚ್ 15: ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿ ನಿರ್ಮಿಸುವಂತೆ ಒತ್ತಾಯಿಸಿ ತಮಿಳುನಾಡಿನ ಎಐಎಡಿಎಂಕೆ(All India Anna Dravida Munnetra Kazhagam) ಸಂಸದರು ಸಂಸತ್ ಎದುರು ಇಂದು(ಮಾ.15) ಪ್ರತಿಭಟನೆ ನಡೆಸಿದರು.

ಫೆ.16 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಆರು ವಾರಗಳಲ್ಲಿ ಕೇಂದ್ರ ಸರ್ಕಾರವು ಕಾವೇರಿ ನಿರ್ವಹಣಾ ಮಂಡಳಿಯನ್ನು ನಿರ್ಮಿಸಲು ಆದೇಶ ನೀಡಿತ್ತು. ಆದರೆ ಕೇಂದ್ರ ಸರ್ಕಾರ, ಮಂಡಳಿ ನಿರ್ಮಾಣದಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿ ಸಂಸದರು ಪ್ರತಿಭಟನೆ ಆರಂಭಿಸಿದ್ದಾರೆ.

ಕಾವೇರಿ ತೀರ್ಪು: ಕರ್ನಾಟಕಕ್ಕೆ ಸಿಹಿಯೂ ಹೌದು, ಕಹಿಯೂ ಹೌದು!ಕಾವೇರಿ ತೀರ್ಪು: ಕರ್ನಾಟಕಕ್ಕೆ ಸಿಹಿಯೂ ಹೌದು, ಕಹಿಯೂ ಹೌದು!

ಈ ಕುರಿತಂತೆ ಕರ್ನಾಟಕ ರಾಜ್ಯ ಸಂಸದರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.16 ರಂದು ದೆಹಲಿಯ ಕರ್ನಾಟಕ ಭವನದಲ್ಲಿ ಕರೆದಿದ್ದಾರೆ. ಕಾವೇರಿ ಜಲ ನಿರ್ವಹಣಾ ಮಂಡಳಿ ರಚಿಸದಂತೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2007 ರಲ್ಲಿ ಕಾವೇರಿ ನ್ಯಾಯಾಧಿಕರಣ ನೀಡಿದ್ದ ತೀರ್ಪನ್ನು ವಿರೋಧಿಸಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಫೆ.16 ರಂದು ತೀರ್ಪು ನೀಡಿತ್ತು.

ಈ ತೀರ್ಪಿನನ್ವಯ ಕರ್ನಾಟಕ ತಮಿಳುನಾಡಿಗೆ ನೀಡುತ್ತಿದ್ದ 192 ಟಿಎಂಸಿ ಅಡಿ ನೀರಿಗೆ ಬದಲಾಗಿ 177.25 ಟಿಎಂಸಿ ಅಡಿ ನೀರನ್ನಷ್ಟೇ ನೀಡಲು ಆದೇಶಿಸಿತ್ತು. ಇದರಿಂದಾಗಿ ಕರ್ನಾಟಕದ ಬಳಿ 14.75 ಟಿಎಂಸಿ ಅಡಿ ಹೆಚ್ಚುವರಿ ನೀರು ಉಳಿದಂತಾಗಿದೆ. ಇದರೊಂದಿಗೆ ಕಾವೇರಿ ಜಲ ನಿರ್ವಹಣಾ ಮಂಡಳಿ ರಚನೆ ಕೇಂದ್ರ ಸರ್ಕಾರದ ಕೆಲಸ ಎಂದು ಸಹ ಹೇಳಿತ್ತು.

English summary
AIADMK MPs stage protest in Parliament premises over Cauvery issue
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X