ಎಐಸಿಸಿ ಕಚೇರಿಗೂ ತಟ್ಟಿದ ಕೊರೊನಾ ಬಿಸಿ: ನಾಯಕರಿಗೆ ಆತಂಕ

ನವದೆಹಲಿ, ಜೂನ್ 27: ಎಐಸಿಸಿ ಕಚೇರಿಗೂ ಕೊರೊನಾ ಬಿಸಿ ತಟ್ಟಿದೆ. ಕಚೇರಿಯ ಸಿಬ್ಬಂದಿಯಲ್ಲಿ ಮಾರಕ ಕೊರೊನಾ ಸೋಂಕು ದೃಢಪಟ್ಟಿದ್ದು, ಕೆಲ ದಿನಗಳಿಂದ ಕಚೇರಿಗೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕರಿಗೆ ಕರೋನ ಭೀತಿ ಆರಂಭವಾಗಿದೆ.

Recommended Video

      Shivraj Singh Chouhan MP CM visits Mandya's melukote with family | Oneindia Kannada

      ಎಲ್ಲಾ ರಾಜ್ಯದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ವರದಿ ಪಡೆಯಲು ಕಂಟ್ರೋಲ್ ರೂಮ್ನಲ್ಲಿ ಹಲವರು ಕೆಲಸ ಮಾಡುತ್ತಿದ್ದರು. ಇಲ್ಲಿ ಕೆಲಸ ಮಾಡುತ್ತಿದ್ದ ಎಐಸಿಸಿ ಕಚೇರಿ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

      ದೆಹಲಿಯಲ್ಲಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೊರೊನಾ ವಿಪತ್ತು ಹಿನ್ನೆಲೆಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದ ಮೇರೆಗೆ ರಾಜ್ಯ ಕಾಂಗ್ರೆಸ್ ಸಮಿತಿಗಳು ಇಲ್ಲಿ ತೆರೆದಿದ್ದ ಕಂಟ್ರೋಲ್ ರೂಂಗೆ ಮಾಹಿತಿ ನೀಡುತ್ತಿದ್ದವು .

      AICC Office Staff Tested Positive For Coronavirus In Delhi

      ಇತ್ತೀಚೆಗೆ ಕಾಂಗ್ರೆಸ್​ ನಾಯಕ ಅಭಿಷೇಕ್ ಮನು ಸಿಂಘ್ವಿಗೆ ಸೋಂಕು ತಗುಲಿತ್ತು. ಕೊವಿಡ್-19 ಸೋಂಕು ದೃಢವಾಗುತ್ತಿದ್ದಂತೆಯೇ ಕಾಂಗ್ರೆಸ್​ನ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೋಮ್​​ ಕ್ವಾರಂಟೈನ್​​ಗೆ ಒಳಗಾದರು.

      ಮಾರಕ ಕೊರೊನಾ ವೈರಸ್​ ಈಗ ಎಐಸಿಸಿ ಸಿಬ್ಬಂದಿಗೂ ತಗುಲಿದೆ. ಸದ್ಯ ಕೊರೊನಾ ಸೋಂಕಿತ ಎಐಸಿಸಿ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಕೊವಿಡ್​​-19 ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಈತ ಕೆಲಸ ಮಾಡುತ್ತಿದ್ದ ಕಾರಣ ಈ ಎಐಸಿಸಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+