• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಖಾಸಗಿ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ಬೆಲೆ; ಏಮ್ಸ್‌ ನಿರ್ದೇಶಕರ ವಿವರಣೆ...

|

ನವದೆಹಲಿ, ಫೆಬ್ರವರಿ 24: ದೇಶದಲ್ಲಿ ಕೊರೊನಾ ಸೋಂಕಿನ ವಿರುದ್ಧ ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಆರಂಭಗೊಳ್ಳಲಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಎರಡನೇ ಹಂತದ ಕೊರೊನಾ ಲಸಿಕೆಗೆ ದೇಶಾದ್ಯಂತ ಸಾವಿರಾರು ಆಸ್ಪತ್ರೆಗಳಲ್ಲಿ ತಯಾರಿ ಸಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಸರ್ಕಾರಿ ಹಾಗೂ ಖಾಸಗಿ ಕೇಂದ್ರಗಳಲ್ಲಿಯೂ ಲಸಿಕೆ ಪಡೆದುಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಆದರೆ ಲಸಿಕೆಯ ನಿಖರ ಬೆಲೆ ಕುರಿತು ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ.

ಮಾರ್ಚ್ 1 ರಿಂದ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ: 60 ವರ್ಷ ಮೇಲ್ಪಟ್ಟವರಿಗೆ ಆದ್ಯತೆ

ಎರಡನೇ ಹಂತದ ಲಸಿಕಾ ಕಾರ್ಯಕ್ರಮದ ದಿನಾಂಕ ನಿಗದಿ ನಂತರ ಏಮ್ಸ್‌ ನಿರ್ದೇಶಕ ರಣದೀಪ್ ಗುಲೇರಿಯಾ ಮಾತನಾಡಿದ್ದು, ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಜನರು ತಮಗೆ ಅನುಕೂಲಕರವಾದ ಸಮಯದಲ್ಲಿ ಲಸಿಕೆ ಪಡೆದುಕೊಳ್ಳಬಹುದಾಗಿದೆ. ಇದರಿಂದ ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿರುವ ಪ್ರಮಾಣವೂ ಕಡಿಮೆಯಾಗುತ್ತದೆ ಎಂದಿದ್ದಾರೆ.

ಭಾರತದಲ್ಲಿ ಸದ್ಯ ನೀಡಲಾಗುತ್ತಿರುವ ಕೋವಿಶೀಲ್ಡ್‌ ಹಾಗೂ ಕೋವ್ಯಾಕ್ಸಿನ್ ಲಸಿಕೆ ಕೈಗೆಟುಕುವ ದರದಲ್ಲಿಯೇ ಸಿಗಲಿದೆ ಎಂದು ತಿಳಿಸಿದ್ದಾರೆ. ಈ ಲಸಿಕೆಗಳು ತುಂಬಾ ದುಬಾರಿಯಾಗಿರುವುದಿಲ್ಲ. ಕೈಗೆಟುಕುವ ದರದಲ್ಲಿಯೇ ಸಿಗಲಿವೆ. ಸಿರಿಂಜ್‌ಗಳಿಗೆ ಹಾಗೂ ಲಸಿಕೆ ನೀಡಲು ಸಿಬ್ಬಂದಿ ನಿಯೋಜನೆಗೆ ಖಾಸಗಿ ಕೇಂದ್ರಗಳು ಸ್ವಲ್ಪ ಹೆಚ್ಚಿನ ಹಣ ನಿಗದಿ ಮಾಡಬಹುದಷ್ಟೆ. ಕೊರೊನಾ ಪರೀಕ್ಷೆಗೆ ಸರ್ಕಾರ ಹೇಗೆ ದರ ನಿಗದಿ ಮಾಡಿತ್ತೋ, ಹಾಗೆಯೇ ಲಸಿಕೆಗಳಿಗೂ ಪ್ರತ್ಯೇಕ ದರ ನಿಗದಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಭಾರತದಲ್ಲಿ ಜನವರಿ 16ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಮೊದಲ ಹಂತದಲ್ಲಿ 10,767,000 ಮಂದಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಇದೀಗ ಮಾರ್ಚ್‌ ತಿಂಗಳಿನಿಂದ ಎರಡನೇ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭಗೊಳ್ಳಲಿದೆ.

English summary
Private vaccination centres will allow people to come and get vaccinated the way they feel comfortable, said AIIMS director Randeep Guleria,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X