• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದು ಅಪರಾಹ್ನ 4 ಗಂಟೆಗೆ ಮೋದಿ ಭಾಷಣ? ಕುತೂಹಲದಲ್ಲಿ ಜನತೆ

|
   ನರೇಂದ್ರ ಮೋದಿಯವರು ಇಂದು ಮಧ್ಯಾಹ್ನ 4 ಗಂಟೆಗೆ ದೇಶವನ್ನ ಉದ್ದೇಶಿಸಿ ಮಾತನಾಡಲಿದ್ದಾರೆ

   ನವದೆಹಲಿ, ಆಗಸ್ಟ್ 08: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಪರಾಹ್ನ 4 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಆಲ್ ಇಂಡಿಯಾ ರೆಡಿಯೋ, ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ, ನಂತರ ಡಿಲೀಟ್ ಮಾಡಿದೆ.

   ಮೂಲಗಳ ಪ್ರಕಾರ ಮೋದಿ ಅವರು ಆಗಸ್ಟ್ 7 ರಂದೇ ದೇಶವನ್ನುದ್ದೇಶಿಸಿ ಮಾತನಾಡಬೇಕಿತ್ತು. ಆದರೆ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ನಿಧನದಿಂದಾಗಿ ಅದನ್ನು ಮುಂದೂಡಲಾಗಿತ್ತು.

   ಟಿವಿ ಭಾಷಣಕ್ಕೆ ಮೋದಿ ಅನುಮತಿ ಪಡೆದಿರಲಿಲ್ಲ: ಚುನಾವಣಾ ಆಯೋಗ

   ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಸರ್ಕಾರದ ನಡೆಯ ಬಗ್ಗೆ ಮೋದಿ ಮಾತನಾಡಲಿದ್ದಾರೆ ಎಂದು ಊಹಿಸಲಾಗಿದೆ.

   ಲೋಕಸಭೆ ಚುನಾವಣೆಗೂ ಮುನ್ನ ಮಾರ್ಚ್ 27 ರಂದು ದೇಶವನ್ನುದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ, ಮಿಶನ್ ಶಕ್ತಿ ಎಂಬ ಉಪಗ್ರಹ ಪ್ರತಿರೋಧಕ ಅಸ್ತ್ರ ಎ ಸ್ಯಾಟ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿ, ಜೀವಂತ ಉಪಗ್ರಹವೊಂದನ್ನು ಹೊಡೆದು ಹಾಕಿದ ಬಗ್ಗೆ ಮೋದಿ ಮಾತನಾಡಿದ್ದರು.

   2016 ರ ನವೆಂಬರ್ 8 ರಂದು ರಾತ್ರಿ 8 ಗಂಟೆಯ ಸಮಯದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಮೋದಿ, 1000 ಮತ್ತು 500 ರೂ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರು. ಇದು ಇಡೀ ಭಾರತದಲ್ಲೂ ಸಂಚಲನ ಮೂಡಿಸಿತ್ತು.

   ಆದ್ದರಿಂದ ಮೋದಿ ದೇಶವನ್ನುದ್ದೇಶಿಸಿ ಮಾತನಾಡುತ್ತಾರೆಂದರೆ ಇನ್ನೇನು ಗಂಡಾಂತರ ಕಾದಿದೆಯೋ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಚರ್ಚೆ ಆರಂಭವಾಗಿದೆ.

   ಆದರೆ ಮೋದಿ ಭಾಷಣದ ಕುರಿತು ತಾನು ಮಾಡಿದ್ದ ಟ್ವೀಟ್ ಅನ್ನು ಆಲ್ ಇಂಡಿಯಾ ರೇಡಿಯೋ ಡಿಲೀಟ್ ಮಾಡಿರುವುದರಿಂದ ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಮೋದಿಯವರೂ ಯಾವುದೇ ಟ್ವೀಟ್ ಮಾಡಿಲ್ಲ.

   English summary
   AIR says PM Modi's address to nation at 4 pm, deletes tweet later,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X