2021 ರ ಎಲ್ಲಾ ಹಜ್ ಅರ್ಜಿಗಳು ರದ್ದು: ಭಾರತದ ಹಜ್ ಸಮಿತಿ
ನವದೆಹಲಿ, ಜೂ. 15: ಹಜ್ 2021 ಕ್ಕೆ ನಿಗದಿಯಾಗಿದ್ದ ಎಲ್ಲಾ ಅರ್ಜಿಗಳನ್ನು ಮಂಗಳವಾರ ಭಾರತದ ಹಜ್ ಸಮಿತಿ ರದ್ದುಗೊಳಿಸಿದೆ. ನಾಗರಿಕರು ಮತ್ತು ಸ್ಥಳೀಯ ನಿವಾಸಿಗಳಿಗೆ ಸೀಮಿತ ಸಂಖ್ಯೆಯಲ್ಲಿ ಮಾತ್ರ ಹಜ್ಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ಸೌದಿ ಅರೇಬಿಯಾ ಘೋಷಿಸಿದ ನಂತರ ಭಾರತದ ಹಜ್ ಸಮಿತಿ ಈ ನಿರ್ಧಾರಕ್ಕೆ ಬಂದಿದೆ.
All applications for Haj 2021 cancelled: Haj Committee of India pic.twitter.com/z1Pnnrz4Ha
— ANI (@ANI) June 15, 2021
ಈ ಬಗ್ಗೆ ಮಾಹಿತಿ ನೀಡಿರುವ ಹಜ್ ಸಮಿತಿ, "ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ ಸಚಿವಾಲಯವು ಕೊರೊನಾ ವೈರಸ್ ಸಾಂಕ್ರಾಮಿಕ ಕಾರಣದಿಂದಾಗಿ ಸೌದಿ ಅರೇಬಿಯಾದ ನಾಗರಿಕರು ಮತ್ತು ನಿವಾಸಿಗಳಿಗೆ ಮಾತ್ರ ಸೀಮಿತ ಸಂಖ್ಯೆಯಲ್ಲಿ ಹಜ್ಗೆ ಹಾಜರಾಗಲು ಅವಕಾಶ ನೀಡಲು ನಿರ್ಧರಿಸಿದೆ ಎಂದು ತಿಳಿಸಿದೆ. ಈ ಬಾರಿ ಹಜ್ ರದ್ದು ಮಾಡಲಾಗಿದೆ. ಆದ್ದರಿಂದ, ಹಜ್ 2021 ಎಲ್ಲಾ ಅರ್ಜಿಗಳನ್ನು ರದ್ದುಪಡಿಸಲು ಭಾರತದ ಹಜ್ ಸಮಿತಿಯು ನಿರ್ಧರಿಸಿದೆ," ಎಂದು ತಿಳಿಸಿದೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಹಜ್ ತೀರ್ಥಯಾತ್ರೆ 60,000 ಕ್ಕಿಂತ ಕಡಿಮೆ ಜನರಿಗೆ ಮಾತ್ರ ಸೀಮಿತವಾಗಿದೆ ಎಂದು ಶನಿವಾರ ಸೌದಿ ಅರೇಬಿಯಾ ಘೋಷಿಸಿದೆ.

ಕಳೆದ ವರ್ಷದ ಹಜ್ನಲ್ಲಿ ಈಗಾಗಲೇ ಸೌದಿ ಅರೇಬಿಯಾದಲ್ಲಿ ವಾಸಿಸುತ್ತಿರುವ 1,000 ಜನರು ಭಾಗವಹಿಸಲು ಆಯ್ಕೆ ಮಾಡಲಾಗಿತ್ತು. 160 ವಿವಿಧ ರಾಷ್ಟ್ರದಿಂದ ಮೂರರಲ್ಲಿ ಎರಡು ಭಾಗದಷ್ಟು ವಿದೇಶಿಗರು ಆಗಮಿಸಿದ್ದರು. ಮೂರನೇ ಒಂದು ಭಾಗದಷ್ಟು ಜನರು ಸೌದಿ ಭದ್ರತಾ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಗಳು ಇದ್ದರು. ಪ್ರತಿ ವರ್ಷ, ಸುಮಾರು 2 ಮಿಲಿಯನ್ ಮುಸ್ಲಿಮರು ಹಜ್ ಪ್ರಯಾಣ ಮಾಡುತ್ತಾರೆ.
(ಒನ್ಇಂಡಿಯಾ ಸುದ್ದಿ)
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications