ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ ಸೋಂಕಿತರನ್ನು ಪತ್ತೆ ಹಚ್ಚಲು 'ಸ್ಮಾರ್ಟ್ ರಿಸ್ಟ್ ಬ್ಯಾಂಡ್' ಬಳಕೆ!

|
Google Oneindia Kannada News

ದೆಹಲಿ, ಜುಲೈ 23: ಕೊರೊನಾ ವೈರಸ್ ಸೋಂಕಿತರು ಹಾಗೂ ಶಂಕಿತರನ್ನು ಪತ್ತೆ ಹಚ್ಚಲು ಹಾಗೂ ಅವರ ಚಲನವಲನ ಮೇಲೆ ನಿಗಾ ವಹಿಸಲು ನಾಗ್ಪುರದ ಸಂಶೋಧನಾ ತಂಡ 'ಸ್ಮಾರ್ಟ್ ರಿಸ್ಟ್ ಬ್ಯಾಂಡ್‌'ನ್ನು ಪರಿಚಯಿಸುತ್ತಿದೆ.

ಕಂಟೈನ್‌ಮೆಂಟ್‌ ಜೋನ್‌ಗಳಲ್ಲಿರುವ ಕೊರೊನಾ ಶಂಕಿತರ ಚಲನವಲನ ಹಾಗೂ ಸೋಂಕಿತರ ಓಡಾಟ ಕುರಿತು ಅವರ ಮೇಲೆ ನಿಗಾ ವಹಿಸಲು ಸ್ಮಾರ್ಟ್ ರಿಸ್ಟ್ ಬ್ಯಾಂಡ್‌ ಸಹಾಕಾರಿಯಾಗಲಿದೆ.

ಕೊರೊನಾ ಸಾವಿನ ಸಂಖ್ಯೆಯಲ್ಲಿ ಸ್ಪೇನ್ ದೇಶವನ್ನು ಹಿಂದಿಕ್ಕಿದ ಭಾರತಕೊರೊನಾ ಸಾವಿನ ಸಂಖ್ಯೆಯಲ್ಲಿ ಸ್ಪೇನ್ ದೇಶವನ್ನು ಹಿಂದಿಕ್ಕಿದ ಭಾರತ

ನಾಗ್ಪುರದ ಐಐಟಿ ಜೋಧ್ಪುರ್ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಸಹಯೋಗದೊಂದಿಗೆ ನಾಗ್ಪುರದ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಈ ಸ್ಮಾರ್ಟ್ ರಿಸ್ಟ್ ಬ್ಯಾಂಡ್‌ ವಿನ್ಯಾಸಗೊಳಿಸಿದ್ದು, ಅತಿ ಶೀಘ್ರದಲ್ಲಿ ಮಾರುಕಟ್ಟೆಗೆ ತರಲಿದೆ.

ನಾಗ್ಪುರದ ಏಮ್ಸ್‌ನ ಶರೀರಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ಡಾ.ಪ್ರಥಮೇಶ್ ಕಾಂಬ್ಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ''ಕಂಟೈನ್‌ಮೆಂಟ್‌ ವಲಯಗಳಲ್ಲಿ ಯಾವುದೇ ಉಲ್ಲಂಘನೆ ಆದರೂ ನೈಜ-ಸಮಯದಲ್ಲಿ ಎಚ್ಚರಿಕೆಯನ್ನು ನೀಡುತ್ತದೆ' ಎಂದು ತಿಳಿಸಿದ್ದಾರೆ.

All India Institute Of Medical Sciences Developed A Smart Wrist Band For Tracking

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಬುಧವಾರ ಬೆಳಗ್ಗೆ 8 ರಿಂದ ಗುರುವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 45,720 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 1,129 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

English summary
All India Institute of Medical Sciences has indigenously designed & developed a ‘smart wrist band’ for tracking & monitoring of COVID-19 positive and suspect patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X