ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿಯಲ್ಲಿ ಅಕ್ಟೋಬರ್.31ರವರೆಗೂ ಶಾಲೆ ತೆರೆಯಲ್ಲ ಎಂದ ಡಿಸಿಎಂ

|
Google Oneindia Kannada News

ನವದೆಹಲಿ, ಅಕ್ಟೋಬರ್.04: ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ಹಿನ್ನೆಲೆ ನವದೆಹಲಿಯಲ್ಲಿ ಅಕ್ಟೋಬರ್.31ರವರೆಗೂ ಶಾಲೆಗಳನ್ನು ತೆರೆಯಲಾಗುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವ ಆಗಿರುವ ಮನೀಶ್ ಸಿಸೋಡಿಯಾ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಇತ್ತೀಚಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಈ ತಿಂಗಳ ಅಂತ್ಯದವರೆಗೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಡಿಸಿಎಂ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಅನ್‌ಲಾಕ್ 5.0 ಬಿಡುಗಡೆ: ಚಿತ್ರಮಂದಿರ ತೆರೆಯಲು ಅನುಮತಿಅನ್‌ಲಾಕ್ 5.0 ಬಿಡುಗಡೆ: ಚಿತ್ರಮಂದಿರ ತೆರೆಯಲು ಅನುಮತಿ

ಕಳೆದ ಅಕ್ಟೋಬರ್.01ರಂದು ಭಾರತ್ ಅನ್ ಲಾಕ್ 5.0 ಜಾರಿಗೊಳಿಸಿರುವ ಕೇಂದ್ರ ಸರ್ಕಾರವು ಶಾಲೆಗಳನ್ನು ತೆರೆಯುವುದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿತ್ತು. ಆದರೆ ಪ್ರಾದೇಶಿಕ ಮಟ್ಟದಲ್ಲಿ ಕೊವಿಡ್-19 ಪರಿಸ್ಥಿತಿ ಮೇಲೆ ಶಾಲೆಗಳನ್ನು ತೆರೆಯಬೇಕೇ ಬೇಡವೇ ಎನ್ನುವುದನ್ನು ನಿರ್ಧರಿಸುವುದನ್ನು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಲಾಗಿತ್ತು.

All Schools Remain Closed Till Oct.31 In Delhi, Says DCM Manish Sisodia

ನವದೆಹಲಿಯಲ್ಲಿ ಕೊವಿಡ್-19 ಪರಿಸ್ಥಿತಿ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 65 ಲಕ್ಷದ ಗಡಿ ದಾಟಿದೆ. ಈ ಪೈಕಿ ಅತಿಹೆಚ್ಚು ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ದೆಹಲಿಯು 6ನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ನವದೆಹಲಿಯಲ್ಲಿ ಈವರೆಗೂ 287930 ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ 5472 ಮಂದಿ ಪ್ರಾಣ ತೆತ್ತಿದ್ದಾರೆ. 257244 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದರೆ, 25234 ಸಕ್ರಿಯ ಪ್ರಕರಣಗಳಿರುವುದು ದೃಢಪಟ್ಟಿದೆ.

English summary
All Schools Remain Closed Till Oct.31 In Delhi, Says DCM Manish Sisodia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X