ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Corona Effect: ದೆಹಲಿಯಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳು ಬಂದ್!

|
Google Oneindia Kannada News

ನವದೆಹಲಿ, ಏಪ್ರಿಲ್ 09: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಹೆಚ್ಚಿದ ಹಿನ್ನೆಲೆ ನವದೆಹಲಿಯಲ್ಲಿ ಮುಂದಿನ ಆದೇಶದವರೆಗೂ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ನಾಲ್ಕನೇ ಅಲೆಯಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ನವದೆಹಲಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್ಲ ತರಗತಿಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ನವದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಮೂರು ದಿನಗಳ ನಂತರದಲ್ಲಿ ಶಾಲೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗಾಗಲೇ ದೆಹಲಿಯಲ್ಲಿ ಏಪ್ರಿಲ್ 30ರವರೆಗೂ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೂ ಕರ್ಫ್ಯೂ ಜಾರಿಗೊಳಿಸಲಾಗಿದೆ.

Delhi: All Schools To Be Closed Till Further Orders Due To Rise In Corona Cases

ಮಕ್ಕಳು, ಯುವಕರಿಗೆ ಕೊರೊನಾವೈರಸ್ ಅಪಾಯ:

ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನ ನಾಲ್ಕನೇ ಅಲೆಯಿಂದ ಮಕ್ಕಳು ಮತ್ತು ಯುವಕರಿಗೆ ಹೆಚ್ಚು ಅಪಾಯವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಮತ್ತು ಕೆಲಸಕ್ಕೆ ಹೋಗುವ ಯುವಕರಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಈ ಹಿನ್ನೆಲೆ ಕೆಲವು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು 9 ಮತ್ತು 10 ತರಗತಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿವೆ.

ದೆಹಲಿಯಲ್ಲಿ 7437 ಮಂದಿಗೆ ಕೊರೊನಾವೈರಸ್:

ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7437 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಮಹಾಮಾರಿಗೆ ಈವರೆಗೂ 11,157 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Delhi: All Schools To Be Closed Till Further Orders Due To Rise In Corona Cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X