ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆಗೆ ಉತ್ತರಾಖಂಡ್ ಸಿಎಂ

|
Google Oneindia Kannada News

ನವದೆಹಲಿ, ಅಕ್ಟೋಬರ್.29: ಉತ್ತರಾಖಂಡ್ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಈ ಪ್ರಕರಣದ ಸಿಬಿಐ ತನಿಖೆ ನಡೆಸುವಂತೆ ನೈನಿತಾಲ್ ಹೈಕೋರ್ಟ್ ಈಗಾಗಲೇ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಭಾರತೀಯ ದಂಡ ಸಂಹಿತೆ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಇಬ್ಬರು ಪತ್ರಕರ್ತರು ಅರ್ಜಿ ಸಲ್ಲಿಸಿದ್ದರು. 2020ರ ಜುಲೈನಲ್ಲಿ ಉಮೇಶ್ ಶರ್ಮಾ ಮತ್ತು ಶಿವ ಪ್ರಸಾದ್ ಸೆಮ್ವಾಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ತೀರ್ಪು ನೀಡಿತ್ತು.

WFH ಬದಲಿಗೆ ಬಂಪರ್: ಪರ್ವತಗಳ ಮೇಲೆ ಕುಳಿತು ಮಾಡಬಹುದು ಉದ್ಯೋಗ! WFH ಬದಲಿಗೆ ಬಂಪರ್: ಪರ್ವತಗಳ ಮೇಲೆ ಕುಳಿತು ಮಾಡಬಹುದು ಉದ್ಯೋಗ!

ಎಫ್ಐಆರ್ ರದ್ದುಪಡಿಸಿರುವ ಬಗ್ಗೆ ತೀರ್ಪು ನೀಡಿರುವ ಹೈಕೋರ್ಟ್, ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ವಿರುದ್ಧ ಇರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಲು ಸೂಚನೆ ನೀಡಿದೆ.

Allegations Of Corruption: Uttarakhand CM Rawat Moves To SC Against Nainital High court Order

ಅಕ್ರಮ ಹಣ ವರ್ಗಾವಣೆ ಆರೋಪ:

2016ರಲ್ಲಿ ತ್ರಿವೇಂದ್ರ ಸಿಂಗ್ ರಾವತ್, ಉತ್ತರಾಖಂಡ್ ಬಿಜೆಪಿಯ ಉಸ್ತುವಾರಿ ವಹಿಸಿಕೊಂಡಿದ್ದರು. ಅಂದು ಗ್ರಾಮ ಸೇವಾ ಆಯೋಗದ ಮುಖ್ಯಸ್ಥರಾಗಿ ನೇಮಿಸುವುದಕ್ಕಾಗಿ ತಮ್ಮ ಸಂಬಂಧಿಕರ ಬ್ಯಾಂಕ್ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಉಮೇಶ್ ಶರ್ಮಾ ಆರೋಪಿಸಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧ ವಕೀಲ ದಿವ್ಯಾಮ್ ಅಗರ್ವಾಲ್ ಮೂಲಕ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

English summary
Uttarakhand CM Rawat Moves To SC Against Nainital High court Order For CBI Probe Into Allegations Of Corruption.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X