ಬೆಕ್ಕುಗಳಂತೆ ಕಿತ್ತಾಡಿಕೊಂಡ ಸಿಬಿಐ ಅಧಿಕಾರಿಗಳು: ಕೇಂದ್ರದ ಆರೋಪ
ನವದೆಹಲಿ, ಡಿಸೆಂಬರ್ 5: ಲಂಚ ಪ್ರಕರಣದ ಆರೋಪಿಯಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ, ತಮ್ಮನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳಾದ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಇಬ್ಬರೂ ಜಗಳವಾಡುವ ಮೂಲಕ ತನಿಖಾ ಸಂಸ್ಥೆಯ ಮಾನವನ್ನು ಸಾರ್ವಜನಿಕವಾಗಿ ಹರಾಜು ಹಾಕಿದ್ದಾರೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಹೇಳಿದೆ.
ಅಲೋಕ್ ವರ್ಮಾ ಅವರ ಅರ್ಜಿಯನ್ನು ಬುಧವಾರ ವಿಚಾರಣೆಗೆ ಎತ್ತಿಕೊಂಡ ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಬೆಕ್ಕುಗಳಂತೆ ಕಿತ್ತಾಡಿಕೊಳ್ಳುತ್ತಿದ್ದ ಸಿಬಿಐನ ಇಬ್ಬರು ಉನ್ನತ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವುದು ಅಗತ್ಯವಾಗಿತ್ತು ಎಂದು ಹೇಳಿದರು.

'ಹಿರಿಯ ಅಧಿಕಾರಿಗಳಿಬ್ಬರೂ ಏನು ಮಾಡುತ್ತಿದ್ದಾರೆ ಎಂದು ಭಾರತ ಸರ್ಕಾರ ಆಶ್ಚರ್ಯಚಕಿತಗೊಂಡು ನೋಡುತ್ತಿತ್ತು. ಅವರಿಬ್ಬರೂ ಬೆಕ್ಕುಗಳಂತೆ ಜಗಳವಾಡುತ್ತಿದ್ದರು' ಎಂದು ವೇಣುಗೋಪಾಲ್ ವಿವರಿಸಿದರು.
ಸಿಬಿಐ ನಿರ್ದೇಶಕರು ಮತ್ತು ವಿಶೇಷ ನಿರ್ದೇಶಕರ ನಡುವಣ ವಿವಾದವು ತನಿಖಾ ಸಂಸ್ಥೆಯ ಸಮಗ್ರತೆ ಮತ್ತು ಗೌರವವನ್ನು ಬೀದಿಪಾಲು ಮಾಡುತ್ತಿತ್ತು. ಸಂಸ್ಥೆಯ ಕುರಿತಾದ ಜನರ ಆತ್ಮವಿಶ್ವಾಸವನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶವಾಗಿತ್ತು ಎಂದು ಅವರು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠಕ್ಕೆ ತಿಳಿಸಿದರು.
ನವೆಂಬರ್ 29ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಸಿಬಿಐ ನಿರ್ದೇಶಕರನ್ನು ಯಾವುದೇ ಸಂದರ್ಭದಲ್ಲಿ ರಜೆಯ ಮೇಲೆ ಕಳುಹಿಸುವ ಅಧಿಕಾರ ಹೊಂದಿದೆಯೇ ಅಥವಾ ಇದಕ್ಕೂ ಮುನ್ನ ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯನ್ನು ಸಂಪರ್ಕಿಸಬೇಕಿತ್ತೇ ಎಂಬುದನ್ನು ಮೊದಲು ಪರಿಗಣಿಸುವುದಾಗಿ ಹೇಳಿತ್ತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications