India
 • search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೈರ್ ಬಂಧನ

|
Google Oneindia Kannada News

ನವದೆಹಲಿ, ಜೂನ್ 27: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆ ಆಲ್ಟ್‌ನ್ಯೂಸ್ ಸಂಸ್ಥಾಪಕರಲ್ಲಿ ಒಬ್ಬರಾದ ಪತ್ರಕರ್ತ ಮೊಹಮ್ಮದ್ ಜುಬೈರ್ ಅನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಧಾರ್ಮಿಕ ವಿಷಯದಲ್ಲಿ ದ್ವೇಷವನ್ನು ಉತ್ತೇಜಿಸುವ ಆರೋಪದ ಮೇರೆಗೆ ಸತ್ಯ ತಪಾಸಣೆ ವೆಬ್‌ಸೈಟ್ ಆಲ್ಟ್‌ನ್ಯೂಸ್ ಪತ್ರಕರ್ತರನ್ನು ಬಂಧಿಸಲಾಗಿದೆ. ಮೊಹಮ್ಮದ್ ಜುಬೈರ್ ಅನ್ನು ಈ ಪ್ರಕರಣದಲ್ಲಿ ಬಂಧಿಸಿದ್ದು, ಬೇರೆ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಆಲ್ಟ್‌ನ್ಯೂಸ್ ಸಹ ಸಂಸ್ಥಾಪಕ ಪ್ರತೀಕ್ ಸಿನ್ಹಾ ದೂಷಿಸಿದ್ದಾರೆ.

ಧಾರ್ಮಿಕ ವೈಷಮ್ಯ: ನುಪೂರ್‌ ಜೊತೆ ಪತ್ರಕರ್ತೆ ಮೇಲೂ ಕೇಸು ಧಾರ್ಮಿಕ ವೈಷಮ್ಯ: ನುಪೂರ್‌ ಜೊತೆ ಪತ್ರಕರ್ತೆ ಮೇಲೂ ಕೇಸು

ಅಲ್ಲದೇ ಕಡ್ಡಾಯ ನೋಟಿಸ್ ನೀಡದೇ ಬಂಧಿಸಲಾಗಿದ್ದು, ಎಫ್ಐಆರ್ ಪ್ರತಿಯನ್ನು ಪದೇ ಪದೆ ಕೇಳಿದರೂ ನೀಡುತ್ತಿಲ್ಲ," ಎಂದು ಟ್ವೀಟ್ ಮಾಡಿದ್ದಾರೆ. ಆದಾಗ್ಯೂ, ಸ್ಪೆಷಲ್ ಸೆಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಮೊಹಮ್ಮದ್ ಜುಬೈರ್ ತನಿಖೆ ನಡೆಸಲಾಗುತ್ತಿದೆ.

ಈ ಸಂಬಂಧ "ಹಲವು ದಾಖಲೆಯಲ್ಲಿ ಸಾಕಷ್ಟು ಪುರಾವೆಗಳನ್ನು ಸಂಗ್ರಹಿಸಿದ ನಂತರವೇ ಅವರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಎದುರು ಹಾಜರು: ಆಲ್ಟ್‌ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೈರ್ ಅನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ಪೊಲೀಸರು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸತ್ಯ-ಪರಿಶೀಲನೆ ಔಟ್‌ಲೆಟ್‌: ಕಳೆದ 2017ರಲ್ಲಿ ಸ್ಥಾಪಿತವಾದ AltNews ವಿಶ್ವದ ಅತ್ಯಂತ ಪ್ರಮುಖವಾದ ಸತ್ಯ-ಪರಿಶೀಲನೆಯ ಔಟ್‌ಲೆಟ್‌ಗಳಲ್ಲಿ ಒಂದಾಗಿದೆ. ಇದರ ಸಂಸ್ಥಾಪಕರು ಹಲವು ವರ್ಷಗಳಿಂದ ಬಲಪಂಥೀಯ ಗುಂಪುಗಳಿಂದ ಆನ್‌ಲೈನ್ ಟ್ರೋಲಿಂಗ್ ಮತ್ತು ಪೊಲೀಸ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮೊಹಮ್ಮದ್ ಜುಬೇರ್ ವಿರುದ್ಧ ಇತ್ತೀಚಿನ ಪ್ರಕರಣಗಳಲ್ಲಿ ಒಂದು ತಿಂಗಳ ಹಿಂದೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ದಾಖಲಾಗಿತ್ತು.

   ಯಾರು ಇಲ್ಲದಿದ್ದರೂ ನಗುಮುಖದಲ್ಲಿ ನಮಸ್ಕಾರ ಮಾಡುತ್ತಿರುವ ರಾಜಕಾರಣಿ! | *Politics | OneIndia Kannada
   English summary
   AltNews Journalist Mohammed Zubair Arrested For Allegedly Hurting Religious Sentiments in Delhi. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X