ದೆಹಲಿಯಲ್ಲಿ ಮೇ 3ರವರೆಗೂ ಲಾಕ್‌ಡೌನ್ ವಿಸ್ತರಿಸಿದ ಸರ್ಕಾರ

ನವದೆಹಲಿ, ಏಪ್ರಿಲ್ 25: ಕೊರೊನಾವೈರಸ್ ಸೋಂಕಿತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಮುಂದಿನ ಒಂದು ವಾರಗಳವರೆಗೂ ಲಾಕ್‌ಡೌನ್ ವಿಸ್ತರಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಕೊವಿಡ್-19 ಸೋಂಕಿನ ಹರಡುವಿಕೆ ಪ್ರಮಾಣಯಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಕೊರೊನಾವೈರಸ್ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇ 3ರ ಸೋಮವಾರ ಸಂಜೆ 5 ಗಂಟೆವರೆಗೂ ಲಾಕ್‌ಡೌನ್ ವಿಸ್ತರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಾಂಕ್ರಾಮಿಕ ಪಿಡುಗು ಆರಂಭವಾದ ದಿನದಿಂದ ಈವರೆಗೂ ಅತಿಹೆಚ್ಚು ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಗುರುವಾರ ಪಾಸಿಟಿವಿಟಿ ದರ ಶೇ.36ರಷ್ಟು ದಾಖಲಾಗಿದೆ. ದೆಹಲಿಯ ಕೆಲವು ಪ್ರದೇಶಗಳಲ್ಲಿ ಆಕ್ಸಿಜನ್ ಪೂರೈಸುವಲ್ಲಿ ಸರ್ಕಾರ ವಿಫಲವಾಗಿದ್ದು, ಇನ್ನು ಕೆಲವು ಪ್ರದೇಶಗಳಲ್ಲಿ ಆಮ್ಲಜನಕವನ್ನು ಸರಬರಾಜು ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ರಾಜ್ಯದಲ್ಲಿ ಕೆಲವೇ ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Amid Corona Cases Rises Delhi Govt Extends Lockdown Till May 3rd

ದೆಹಲಿಯಲ್ಲಿ ಕೊರೊನಾವೈರಸ್ ಅಟ್ಟಹಾಸ:

ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 24103 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 357 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 13898ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ 22,695 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 8,97,804ಕ್ಕೆ ಏರಿಕೆಯಾಗಿದೆ. ಇತರ ಹೊರತಾಗಿ ದೆಹಲಿಯಲ್ಲಿ 93080 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+