• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮುಂದಿನ ಎರಡು ವಾರ ದೆಹಲಿಯ ಏಮ್ಸ್ ಓಪಿಡಿ ವಿಭಾಗ ಬಂದ್

|

ನವದೆಹಲಿ, ಸಪ್ಟೆಂಬರ್.02: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತು ಕೊವಿಡ್-19 ಅಲ್ಲದ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಏಮ್ಸ್ ಆಸ್ಪತ್ರೆಯಲ್ಲಿ ಮುಂದಿನ ಎರಡು ವಾರಗಳ ಕಾಲ ಓಪಿಡಿ (ಹೊರ ರೋಗಿಗಳ ವಿಭಾಗ)ವನ್ನು ಮುಚ್ಚಲಾಗುತ್ತದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

   Sandalwood Drug Mafia ಬಗ್ಗೆ Kannada film Chamber ವಿಶೇಷ ಪತ್ರಿಕಾಗೋಷ್ಠಿ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ನವದೆಹಲಿಯಲ್ಲಿ ಎರಡು ತಿಂಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಕೊವಿಡ್-19 ಹೊರತಾಗಿ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ ರೋಗಿಗಳು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಹಾಸಿಗೆ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

   ದೆಹಲಿಯಲ್ಲಿ 2 ತಿಂಗಳ ಬಳಿಕ ಗರಿಷ್ಠ ಕೊರೊನಾ ಪ್ರಕರಣ ದಾಖಲು

   ತುರ್ತು ಪರಿಸ್ಥಿತಿಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಯುಳ್ಳ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತದೆ. ಆದರೆ ಹೊರ ರೋಗಿಗಳ ವಿಭಾಗವನ್ನು ಮುಂದಿನ ಎರಡು ವಾರಗಳ ಕಾಲ ಬಂದ್ ಮಾಡಲಾಗುವುದು ಎಂದು ಏಮ್ಸ್ ಆಸ್ಪತ್ರೆಯ ಸೂಪರಿಟೆಂಡೆಂಟ್ ಡಾ.ಡಿ.ಕೆ.ಶರ್ಮಾ ತಿಳಿಸಿದ್ದಾರೆ.

   ಏಮ್ಸ್ ಓಪಿಡಿ ಸೇವೆ ಮುಚ್ಚಲು ಕಾರಣ:

   ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಎರಡು ತಿಂಗಳ ನಂತರದಲ್ಲಿ 2 ಸಾವಿರದ ಗಡಿ ದಾಟುತ್ತಿದೆ. ಇದರ ಜೊತೆಗೆ ಕೊರೊನಾವೈರಸ್ ಹೊರತಾಗಿ ಇತರೆ ಗಂಭೀರ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬರುತ್ತಿದೆ. ಈ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಮುಂದಿನ ದಿನಗಳಲ್ಲಿ ರೋಗಿಗಳಿಗೆ ಬೆಡ್ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಓಪಿಡಿಗಳನ್ನು ಬಂದ್ ಮಾಡಲಾಗಿದೆ ಎಂದು ಡಾ.ಡಿ.ಕೆ.ಶರ್ಮಾ ಮಾಹಿತಿ ನೀಡಿದ್ದಾರೆ.

   ದೆಹಲಿಯಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

   ನವದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲೇ 2312 ಜನರಿಗೆ ಕೊರೊನಾವೈರಸ್ ಸೋಂಕಿತರು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 18 ಮಂದಿ ಮಹಾಮಾರಿಗೆ ಪ್ರಾಣ ಬಿಟ್ಟಿದ್ದಾರೆ. ಒಟ್ಟು 1.77 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಕೊವಿಡ್-19ಗೆ ಇದುವರೆಗೂ 4462 ಜನರು ಬಲಿಯಾಗಿದ್ದಾರೆ.

   English summary
   Amid COVID-19 Rise, Delhi AIIMS Suspends Routine OPD Admissions For Two Weeks.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X