• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕದ 'ಸಿಎಂ' ಯಡಿಯೂರಪ್ಪಗೆ ಅಭಿನಂದಿಸಿದ ಅಮಿತ್ ಶಾ!

|

ಬೆಂಗಳೂರು, ಜುಲೈ 26: ಕರ್ನಾಟಕ ಮುಖ್ಯಮಂತ್ರಿಯಾಗಿ 4ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

3 ಶಾಸಕರು ಅನರ್ಹ, ಬಿಎಸ್ವೈ ಸಿಎಂ, ಸದನದ ಬಲಾಬಲ? 3 ಶಾಸಕರು ಅನರ್ಹ, ಬಿಎಸ್ವೈ ಸಿಎಂ, ಸದನದ ಬಲಾಬಲ?

ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ ಅವರಿಗೆ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಪ್ರಧಾನಿ ಮೋದಿಯವರ ಮಾರ್ಗದರ್ಶನದಲ್ಲಿ ಬಿಜೆಪಿ ರಾಜ್ಯದಲ್ಲಿ ಸ್ಥಿರ, ರೈತ ಪರ, ಅಭಿವೃದ್ಧಿ ಆಧರಿತ ಆಡಳಿತವನ್ನು ನೀಡುತ್ತದೆ ಎಂಬ ವಿಶ್ವಾಸವಿದೆ. ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸಲು ಬಿಜೆಪಿ ಬದ್ಧವಾಗಿದೆ ಎಂದು ನಾನು ಕರ್ನಾಟಕದ ಜನರಿಗೆ ಭರವಸೆ ನೀಡುತ್ತೇನೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯ ಬಿಜೆಪಿ ನಾಯಕರ ನಿಯೋಗ ಭೇಟಿ ಮಾಡಿ, ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಸಿ ಅನುಮತಿ ಪಡೆದುಕೊಂಡಿದ್ದರು. ಸರ್ಕಾರ ರಚನೆ, ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಲು ರಾಜ್ಯಪಾಲ ವಜುಭಾಯಿ ವಾಲ ಅವರನ್ನು ಇಂದು ಬೆಳಗ್ಗೆ ಯಡಿಯೂರಪ್ಪ ಭೇಟಿ ಮಾಡಿದರು. ಸಂಜೆ ವೇಳೆಗೆ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು.

"ಶಿಸ್ತಿನ ಸಿಪಾಯಿ" ಯಡಿಯೂರಪ್ಪ ರಾಜಕೀಯ ಬದುಕಿನ ಚಿತ್ರಣ

ಈ ನಡುವೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಸರ್ಕಾರ ಉಳಿಸಿಕೊಳ್ಳಲು ಅಗತ್ಯ ಸಂಖ್ಯಾಬಲವನ್ನು ವಿಧಾನಸಭೆಯಲ್ಲಿ ಹೊಂದಿದೆಯೇ? ಎಂಬ ಪ್ರಶ್ನೆ ಇನ್ನೂ ಕಾಡುತ್ತಿದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡೇ ಅಮಿತ್ ಶಾ ಅವರು ಗ್ರೀನ್ ಸಿಗ್ನಲ್ ನೀಡಿದ್ದರಿಂದ ತ್ವರಿತವಾಗಿ ಪದಗ್ರಹಣ ಕಾರ್ಯಕ್ರಮಕ್ಕಾಗಿ ಬಿಜೆಪಿ ಕರ್ನಾಟಕ ಸಜ್ಜಾಗಬೇಕಾಯಿತು.

English summary
Union Home Minister and BJP President Amit Shah congratulates BS Yediyurappa on becoming the new Karnataka CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X