ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೃಹ ಸಚಿವ ಅಮಿತ್ ಶಾ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

|
Google Oneindia Kannada News

ನವದೆಹಲಿ, ಆಗಸ್ಟ್ 31: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.

Recommended Video

ನಾವು ಏನು ಮಾಡಿಲ್ಲ ಎಂದು Indiaಕ್ಕೆ ಸ್ಪಷ್ಟನೆ ಕೊಟ್ಟ China | Oneindia Kannada

ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಪೋಸ್ಟ್ ಕೊವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಶನಿವಾರ ಅಮಿತ್ ಶಾ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಅವರು ಬೇಗ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ.

Amit Shah Discharged From AIIMS Hospitals Post Covid Care Centre

ಅವರು ದೇಹದ ಬಳಲಿಕೆ ಮತ್ತು ಆಯಾಸದಿಂದ ಬಳಲುತ್ತಿದ್ದರು. ಕೊರೊನಾ ಸೋಂಕಿನ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಅಮಿತ್ ಶಾ ಗುಣಮುಖರಾಗಿದ್ದರು, ಆಗಸ್ಟ್ 14 ರಂದು ಗುರುಗ್ರಾಮದ ಮೆದಾಂತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಖಿಲ ಭಾರತ ವೈದ್ಯಕೀಯ (ಏಮ್ಸ್) ಆಸ್ಪತ್ರೆಗೆ ದಾಖಲಾಗಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್

ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ಅವರು, ಚೇತರಿಸಿಕೊಂಡು ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಕೊರೊನಾ ಚಿಕಿತ್ಸೆ ಚೇತರಿಕೆಯ ನಂತರ ಕಂಡು ಬರುವ ಕೆಲವು ಸಾಮಾನ್ಯ ಅನಾರೋಗ್ಯ (ಮೈ ಕೈ ನೋವು)ದ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆಯಿಂದಲೇ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಏಮ್ಸ್ ಪ್ರಕಟಣೆ ತಿಳಿಸಿತ್ತು.

ಹರ್ಯಾಣ ಮುಖ್ಯಮಂತ್ರಿ ಎಂಎಲ್ ಖಟ್ಟರ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಹ್ ಚೌಹಾಣ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕೊರೊನಾ ಸೋಂಕು ತಗುಲಿದೆ.

ಇನ್ನು ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಕೊರೊನಾ ಸೋಂಕು ತಗುಲಿದೆ.

English summary
Union Home Minister Amit Shah, who was hospitalised for post Covid-care, was discharged this morning from Delhi's AIIMS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X