• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಹಿಂಸಾಚಾರ: ಅಮಿತ್ ಶಾ, ಅರವಿಂದ್ ಕೇಜ್ರಿವಾಲ್ ತುರ್ತು ಸಭೆ

|

ನವದೆಹಲಿ, ಫೆಬ್ರವರಿ 25: ದೆಹಲಿಯಲ್ಲಿ ಹಿಂಸಾಚಾರ ತಾರಕಕ್ಕೇರುತ್ತಿದ್ದು, ಇದುವರೆಗೂ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆ ನಡೆಸುತ್ತಿದ್ದಾರೆ.

   Amit Shah and Arvind Kejriwal meet up for an emergency meeting | Amit Shah | Kejriwal | Delhi

   ಈಗಾಗಲೇ ಹತ್ತು ಪ್ರದೇಶಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಲೆಫ್ಟಿನೆಂಟ್ ಗವರ್ನರ್ ಅನಿಲ್ ಬಾಯ್‌ಜಾಲ್, ಪೊಲೀಸ್ ಆಯುಕ್ತರಾದ ಅಮೂಲ್ಯ ಪಟ್ನಾಯಕ್,ಕಾಂಗ್ರೆಸ್ ಮುಖಂಡ ಸುಭಾಷ್ ಛೋಪ್ರಾ, ಬಿಜೆಪಿ ಮುಖಂಡ ಮನೋಜ್ ತಿವಾರಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

   ಮಧ್ಯರಾತ್ರಿ ಹೊತ್ತಿ ಉರಿದ ದೇಶದ ರಾಜಧಾನಿ; ಕಿಚ್ಚು ಹಬ್ಬಿದ ವೃತ್ತಾಂತ

   ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಕಡಿಮೆ ಇದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.ಕಳೆದ ಮೂರು ತಿಂಗಳಿಂದ ಸಿಎಎ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಅದು ಹಿಂಸಾಚಾರದ ಹಂತವನ್ನು ತಲುಪಿದೆ. ಸೋಮವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಹೇಳಿದೆ.

   ಜಫ್ರಾಬಾದ್, ಮೌಜ್ ಪುರ್, ಚಾಂದ್ ಬಾಗ್, ಖುರೇಜಿ ಖಾಸ್ ಮತ್ತು ಭಜನ್ ಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉದ್ರಿಕ್ತರ ಮೇಲೆ ಲಾಠಿಪ್ರಹಾರ ನಡೆಸಿದ್ದು, ಅಶ್ರುವಾಯು ಸಿಡಿಸಿದ್ದಾರೆ.

   ಅಗತ್ಯಬಿದ್ದರೆ ಸೇನೆಯನ್ನು ಕೂಡ ನಿಯೋಜಿಸಲಾಗುತ್ತದೆ. ಶೀಘ್ರವೇ ಆ ಸ್ಥಳದಲ್ಲಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗುತ್ತದೆ. ಪೊಲೀಸರ ಅಭಾವದಿಂದಲೇ ಇಂತಹ ಘಟನೆ ನಡೆದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

   English summary
   Tami Nadu: State Minister D Jayakumar gifts gold rings to newly born infants at RSRM Government Hospital in Royapuram, as a part of celebrations on former CM J. Jayalalithaa's birth anniversary.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
   X